ಸಹಪಾಠಿ ಮೇಲೆ ತರಗತಿ ಕೊಠಡಿಯಲ್ಲೇ ಗ್ಯಾಂಗ್ ರೇಪ್

ರಾಷ್ಟ್ರೀಯ

ಮುಂಬಾಯಿಯಲ್ಲಿ ಭಯಾನಕ ಘಟನೆಯೊಂದು ಸಂಭವಿಸಿದ್ದು, ಎಂಟನೇ ತರಗತಿಯ ಸಹಪಾಠಿ ವಿದ್ಯಾರ್ಥಿನಿ ಮೇಲೆ ಇಬ್ಬರು ವಿದ್ಯಾರ್ಥಿಗಳು ಅತ್ಯಾಚಾರ ಎಸಗಿದ ಘಟನೆ ನಡೆದಿದೆ.

ತಾವು ಕಲಿಯುತ್ತಿರುವ ಶಾಲೆಯೊಂದರ ಕೊಠಡಿಯೊಳಗೆ ಇಬ್ಬರು ಯುವಕರು ತಮ್ಮ 13 ವರ್ಷದ ಸಹಪಾಠಿಯ ಮೇಲೆ ಅತ್ಯಾಚಾರವೆಸಗಿದ್ದಾರೆ.ನಂತರ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಾಲಕಿಯ ಮೇಲೆ ಆಕೆಯ ಇಬ್ಬರು ಸಹಪಾಠಿಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.ಅವರ ಸಹಪಾಠಿಗಳು ನೃತ್ಯ ಅಭ್ಯಾಸಕ್ಕಾಗಿ ತರಗತಿಯಿಂದ ಹೊರಬಂದಾಗ ಆರೋಪಿ ಬಾಲಕರು ಪರಿಸ್ಥಿತಿಯ ಲಾಭ ಪಡೆದು ಬಾಲಕಿಯ ಮೇಲೆ ರೇಪ್ ಮಾಡಿದ್ದಾರೆ.

ಘಟನೆಯು ಬಾಲಕಿಗೆ ಆಘಾತವನ್ನುಂಟು ಮಾಡಿತ್ತು. ಮತ್ತು ಅವಳು ತನ್ನ ಕುಟುಂಬದ ಸದಸ್ಯರಿಗೆ ನಡೆದ ಘಟನೆ ಬಗ್ಗೆ ಮಾಹಿತಿ ನೀಡಿದ್ದಾಳೆ.ತಕ್ಷಣ ಕುಟುಂಬದ ಸದಸ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಬಾಲಕರ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 376 DA (ಹದಿನಾರು ವರ್ಷದೊಳಗಿನ ಮಹಿಳೆಯ ಸಾಮೂಹಿಕ ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.