ಬಿಜೆಪಿಯ ಮಾಜಿ ಸಚಿವರು ಸೇರಿ ಹಲವಾರು ಮಂದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ರಾಜ್ಯ

ಕಲಬುರಗಿ: ಬಿಜೆಪಿ ಸರಕಾರದಲ್ಲಿ ಪಶು ಸಂಗೋಪನಾ ಸಚಿವರಾಗಿದ್ದ ರೇವೂ ನಾಯಕ ಬೆಳಮಗಿ ಅವರು ಶುಕ್ರವಾರ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಪಕ್ಷದ ಹಿರಿಯ ಮುಖಂಡರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಮೋದಿನ್ ಪಟೇಲ್ ಅಣಬಿ ಎಐಎಂಐಎಂ ಪಕ್ಷ ತೊರೆದು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾದರು.ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಪ್ರಿಯಾಂಕ್ ಖರ್ಗೆ, ಶಾಸಕಿ ಕನಿಜ್ ಫಾತಿಮಾ, ಶರಣಬಸಪ್ಪಗೌಡ ದರ್ಶನಾಪುರ್, ಶರಣಪ್ರಕಾಶ್ ಪಾಟೀಲ್, ಅಲ್ಲಂ ವೀರಭದ್ರಪ್ಪ, ಅಲ್ಲಮಪ್ರಭು ಪಾಟೀಲ್, ತಿಪ್ಪಣ್ಣಪ್ಪ ಕಮಕನೂರ್, ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಜಗದೇವ ಗುತ್ತೇದಾರ್, ಕಾಂಗ್ರೇಸ್ ಪಕ್ಷದ ಮುಖಂಡರು, ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.