ಏಳು ದಿನಗಳಲ್ಲಿ ಭೂ ಪರಿವರ್ತನೆಗೆ ಕಾನೂನು;ಹೊಸ ವಿದೇಯಕ ಮಂಡನೆ

ರಾಜ್ಯ

ರಾಜ್ಯ ಸರ್ಕಾರವು ಕರ್ನಾಟಕ ಭೂ ಕಂದಾಯ ವಿಧೇಯಕವನ್ನು ಮಂಡಿಸಿ ರಾಜ್ಯದ ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗಾಗಿ ಪರಿವರ್ತಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳೀಕರಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಕಟ್ಟಡ ನಿರ್ಮಾಣ ಮಾಡಲು ಭೂಮಿ ಪರಿವರ್ತನೆಗಾಗಿ ಸುಮಾರು 5-6 ತಿಂಗಳು ಅಲೆದಾಡಬೇಕಾಗಿತ್ತು. ಇದನ್ನು ಏಳು ದಿನಗಳಲ್ಲಿ ಮಾಡಿಕೊಡಲು ಈ ವಿಧೇಯಕ ಮಂಡಿಸಲಾಗಿದೆ. ಇದರಿಂದ ಭ್ರಷ್ಟಾಚಾರ ತಪ್ಪಿಸಿದಂತಾಗುತ್ತದೆ ಎಂದು ತಿಳಿಸಿದರು.

ರೈತರು ವ್ಯವಸಾಯ ಉದ್ದೇಶಕ್ಕೆ ಬಳಕೆ ಮಾಡಿಕೊಂಡಿದ್ದ ದಾಖಲೆ ರಹಿತ ಜಮೀನುಗಳಿಗೆ ಭೂಮಿ ಮಂಜೂರು ಮಾಡುವ ಮೂಲಕ ಭೂ ಕಬಳಿಕೆ ಹಣೆಪಟ್ಟಿಯಿಂದ ರೈತರನ್ನು ಮುಕ್ತಿಗೊಳಿಸಲಾಗುತ್ತಿದೆ. ಅರ್ಜಿ ಸಲ್ಲಿಸಿದ ಕನಿಷ್ಠ 7 ದಿನಗಳ ಒಳಗೆ ಭೂ ಪರಿವರ್ತನೆ ಮಾಡುವ ನಿಟ್ಟಿನಲ್ಲಿ ಅಧಿವೇಶನದಲ್ಲಿ ನಿರ್ಧಾರ ತೆಗೆದುಕೊಂಡು ಅನುಷ್ಠಾನಗೊಳಿಸಲಾಗಿದೆ ಎಂದು ತಿಳಿಸಿದರು.