2023 ಜನವರಿ 15 ರೊಳಗೆ 150 ಕ್ಷೇತ್ರಗಳ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಗಳ ಹೆಸರು ಘೋಷಣೆ

ರಾಜ್ಯ

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲೆಡೆ ಪ್ರಮುಖರ ಸಭೆಗಳನ್ನು ನಡೆಸುತ್ತಿದ್ದೇವೆ. 2023 ಜನವರಿ 15 ರೊಳಗೆ ಕನಿಷ್ಠ 150 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲು ತಿರ್ಮಾನಿಸಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.

ರಾಯಚೂರಿನ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪ್ರಮುಖರ ಸಭೆಯ ಬಳಿಕ ಮಾತನಾಡಿದ ಖಂಡ್ರೆ,ರಾಜ್ಯ ಚುನಾವಣಾ ಸಮಿತಿ ಸಭೆಯ ಮಾರ್ಗಸೂಚಿ ಎಲ್ಲರಿಗೆ ಕೊಡಲಾಗಿದೆ. ಕಲ್ಯಾಣ ಕರ್ನಾಟಕದ 41 ಕ್ಷೇತ್ರಗಳಿಗೆ ಸಾವಿರಕ್ಕೂ ಹೆಚ್ಚು ಆಕಾಂಕ್ಷಿಗಳ ಅರ್ಜಿ ಬಂದಿವೆ. ಎಲ್ಲಾ ಮುಖಂಡರಿಂದ ಮಾಹಿತಿ,ಅಭಿಪ್ರಾಯ ಪಡೆದು, ಅಂತಿಮವಾಗಿ ಮೂವರ ಪಟ್ಟಿ ಸಲ್ಲಿಸಲಾಗುವುದು. ಒಂದೊಂದು ಕ್ಷೇತ್ರದಿಂದ ಮೂವರು ಆಕಾಂಕ್ಷಿಗಳ ಹೆಸರನ್ನು ರಾಜ್ಯ ಚುನಾವಣಾ ಸಮಿತಿ ಹಾಗೂ ಎಐಸಿಸಿಗೆ (AICC) ಕಳುಹಿಸುತ್ತೇವೆ ಎಂದಿದ್ದಾರೆ.