ಪ್ರಧಾನಿ ನರೇಂದ್ರ ಮೋದಿಯವರ ಮಾತೃ ವಿಯೋಗ

ರಾಷ್ಟ್ರೀಯ

ಪ್ರಧಾನಿ ನರೇಂದ್ರ ಮೋದಿ ಯವರ ತಾಯಿ ಹೀರಾಬೆನ್ ಮೋದಿ ಇಂದು ಬೆಳಗ್ಗಿನ ಜಾವ 3.39ರ ಸುಮಾರಿಗೆ ಅಹಮದಾಬಾದ್‌ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಕಳೆದ ಜೂನ್ ನಲ್ಲಿ 100 ವರ್ಷ ಪೂರೈಸಿದ್ದ ಮೋದಿ ತಾಯಿ, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಬುಧವಾರ ಅಹಮದಾಬಾದ್‌ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರ ಅವರ ಆರೋಗ್ಯ ಸುಧಾರಿಸಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿದ್ದವು

ಪ್ರಧಾನಿಯವರು ತಮ್ಮ ಪಶ್ಚಿಮ ಬಂಗಾಳ ಪ್ರವಾಸ ರದ್ದುಗೊಳಿಸಿದ್ದು, ತಾಯಿಯ ಅಂತಿಮ ದರ್ಶನ ಪಡೆಯಲಿದ್ದಾರೆ.