ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಮುಹಮ್ಮದ್ ಅಪ್ಲಾ ಅಮನ್ ಶಾಫಿ

ಕರಾವಳಿ

ಗಂಜಿಮಠ: ಮಹಾರಾಷ್ಟ್ರದ ಪುಣೆಯಲ್ಲಿರುವ ನೇತಾಜಿ ಸುಭಾಸ್ ಚಂದ್ರ ಬೋಸ್ ಮಿಲಿಟರಿ ಸ್ಕೂಲ್ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದ ನ್ಯಾಶನಲ್ ಕರಾಟೆ ಫೆಡರೇಶನ್ ಆಫ್ ಇಂಡಿಯಾ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಮೂಡುಬಿದಿರೆಯ ಅಲ್ ಫುರ್ಖಾನ್ ಇಸ್ಲಾಮಿಕ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮುಹಮ್ಮದ್ ಅಪ್ಲಾ ಅಮನ್ ಶಾಫಿ, 13 ವರ್ಷ ವಯೋಮಿತಿಯ 55 ಕೆಜಿ ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಗಳಿಸಿದ್ದಾರೆ.

ಈ ಚಾಂಪಿಯನ್ ಶಿಪ್ ನಲ್ಲಿ ಭಾರತ ಸೇರಿದಂತೆ ನೇಪಾಳ, ಭೂತನ್, ಶ್ರೀಲಂಕಾ, ಬಾಂಗ್ಲಾದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಅಲ್ ಅಮೀನ್ ಗಂಜಿಮಠ ಹಾಗೂ ರೆಹನಾ ದಂಪತಿಯ ಪುತ್ರನಾಗಿರುವ ಅಮನ್ ಶಾಫಿಯವರು ರೆನ್ಸಿ ಮುಹಮ್ಮದ್ ನದೀಮ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.