ಬಾಲಕನ ಮೇಲೆ ಪಣಂಬೂರು ಪೊಲೀಸರಿಂದ ಹಲ್ಲೆ ಆರೋಪ, ಠಾಣೆ ಮುಂದೆ ಪ್ರತಿಭಟನೆ

ಕರಾವಳಿ

ಪಣಂಬೂರು: ಬಾಲಕನ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂಬ ಅರೋಪ ಕೇಳಿ ಬಂದಿದೆ.

ಮಂಗಳೂರಿನ ತಣ್ಣೀರು ಬಾವಿ ಬೀಚ್ ಸಮೀಪದಲ್ಲಿ ಕ್ರಿಕೆಟ್ ಆಟ ಅಡುತ್ತಿದ್ದ ತಂಡವೊಂದು ಕ್ರಿಕೆಟ್‌ನಲ್ಲಿ ಜಯಗಳಿಸಿ ವಾಪಸ್ ತೆರಳುವ ಸಂದರ್ಭದಲ್ಲಿ ಯುವಕರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಬಾಲಕನ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನಂತರ ಪಣಂಬೂರು ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ್ದಾರೆ.

ಗಾಯಗೊಂಡ ಬಾಲಕ ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಬಗ್ಗೆ
ಮಂಗಳೂರು ಪೊಲೀಸ್ ಕಮಿಷನರ್ ಗಮನಕ್ಕೂ ತರಲಾಗಿದೆ.