ಮಂಗಳೂರು ಇಂಜಿನಿಯರಿಂಗ್ ವಿದ್ಯಾರ್ಥಿ ತಾಜುದ್ದೀನ್ ಎನ್ ಐ ಎ ವಶಕ್ಕೆ

ಕರಾವಳಿ

ಕೈರಂಗಳ ಗ್ರಾಮದ ನಡುಪದವಿನ ಸಮೀಪದ ಖಾಸಗಿ ಇಂಜಿನಿಯರಿಂಗ್ ಕಾಲೇಜಿಗೆ ಗುರುವಾರ ದಾಳಿ ನಡೆಸಿದ ಎನ್ ಐಎ ತಂಡ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿದೆ.

ಏಳು ಮಂದಿ ಅಧಿಕಾರಿಗಳ ಎನ್ ಐಎ ತಂಡ ಮಂಗಳೂರಿನಲ್ಲಿ ಉಗ್ರವಾದದ ಪರ ಗೋಡೆ ಬರಹಕ್ಕೆ ಸಂಬಂಧಿಸಿದ ಆರೋಪಿ ಶಿವಮೊಗ್ಗದಿಂದ ಬಂಧಿತನಾಗಿರುವ ಶಂಕಿತ ಉಗ್ರ ಮಾಝ್ ಮುನೀರ್ ಜತೆಗೆ ನಿರಂತರ ಸಂಪರ್ಕ ಹೊಂದಿದ್ದ ಕೈರಂಗಳ ಗ್ರಾಮದ ನಡುವಿನ ಖಾಸಗಿ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿಗೆ ಕರೆದೊಯ್ದಿದ್ದಾರೆ.

ಮೆಕ್ಯಾನಿಕಲ್ ವಿಭಾಗದ ಅಂತಿಮ ವರ್ಷದ ಉಡುಪಿ ಮೂಲದ ವಿದ್ಯಾರ್ಥಿ ತಾಜುದ್ದೀನ್ ನನ್ನು ವಶಕ್ಕೆ ಪಡೆದುಕೊಂಡಿದ್ದು,ಈತ ಶಿವಮೊಗ್ಗದ ಪುರಲೆ ಸಮೀಪದ ತುಂಗಾ ನದಿ ತೀರದಲ್ಲಿ ಪ್ರಾಯೋಗಿಕವಾಗಿ ಸ್ಪೋಟಕವನ್ನು ಸ್ಪೋಟಿಸುತ್ತಿದ್ದ ಪ್ರಕರಣದಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಮಾಝ್ ಮುನೀರ್ ಎಂಬಾತನ ಜೊತೆಗೆ ನಿರಂತರ ಸಂಪರ್ಕ ಹಾಗೂ ವಿವಿಧ ಚಟುವಟಿಕೆಗಳಲ್ಲಿ ಜತೆಯಾಗಿ ಭಾಗಿಯಾಗಿದ್ದ ಎಂಬ ವಿಚಾರದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

ಶಿವಮೊಗ್ಗ ಪ್ರಕರಣದಲ್ಲಿ ಸೈಯದ್ ಯಾಸೀನ್ ಬಂಧನದ ಬಳಿಕ ಮಾಝ್ ಮುನೀರ್ ನನ್ನು ಬಂಧಿಸಿದ್ದು, ಇವರ ಸಹವರ್ತಿಯಾಗಿದ್ದ ಮಂಗಳೂರಿನ ಉಗ್ರ ಪರ ಗೋಡೆ ಬರಹ ಬರೆದಿದ್ದ ಶಾರಿಕ್ ಮಂಗಳೂರಿನಲ್ಲಿ ಇತ್ತೀಚೆಗೆ ನಡೆದಿದ್ದ ಕುಕ್ಕರ್ ಬಾಂಬ್ ಸ್ಪೋಟದಿಂದ ಗಾಯಾಳು ಅಗಿ ಎನ್ ಐಎ ವಶದಲ್ಲಿದ್ದಾನೆ.