ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ನಡೆಸಲು ಸರ್ಕಾರ ರಚಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತ ಮಾಹಿತಿಗಾಗಿ ವೆಬ್ ಸೈಟ್ ಬಿಡುಗಡೆ ಮಾಡಿದೆ.
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳ ಮಾಹಿತಿಗೆ ಏಕ ವೆಬ್ ಸೈಟ್ http://kseab.karnataka.gov.in ಆರಂಭಿಸಲಾಗಿದೆ.
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಈ ವೆಬ್ ಸೈಟ್ ನಲ್ಲಿ ವೀಕ್ಷಿಸಬಹುದಾಗಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಂದು ಬದಲಾಯಿಸಿದ್ದು, ಹೊಸ ವೆಬ್ ಸೈಟ್ ನಲ್ಲಿ ಪರೀಕ್ಷೆಯ ವೇಳಾಪಟ್ಟಿ, ಮಾದರಿ ಪ್ರಶ್ನೆ ಪತ್ರಿಕೆ, ಮಾರ್ಗಸೂಚಿ ಸೇರಿದಂತೆ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಪಡೆಯಬಹುದಾಗಿದೆ.