ದ.ಕ ಜಿಲ್ಲೆಯಲ್ಲಿ ಬಹುತೇಕ ಹೊಸ ಮುಖಗಳಿಗೆ ಟಿಕೇಟ್,ಹಿರಿಯರಿಗೆ ಖಡಕ್ ಸಂದೇಶ ನೀಡಿದ ಕಾಂಗ್ರೆಸ್ ಹೈಕಮಾಂಡ್

ಕರಾವಳಿ

ವಿಧಾನಸಭಾ ಚುನಾವಣೆಗೆ ಇನ್ನೇನೂ ಕೆಲವೇ ಕೆಲವು ತಿಂಗಳು ಬಾಕಿ ಇದೆ. ಕಾಂಗ್ರೆಸ್ ಪಕ್ಷ ಭರ್ಜರಿ ತಯಾರಿ ನಡೆಸುತ್ತಿದೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಹೊಸ ಮುಖಗಳಿಗೆ ಟಿಕೆಟ್ ನೀಡಲು ಹೈಕಮಾಂಡ್ ನಿರ್ಧರಿಸಿವೆ. ಈ ಕುರಿತು ಖಡಕ್ ಸಂದೇಶ ರವಾನಿಸಿದೆ ಎಂದು ಹೈಕಮಾಂಡ್ ಮೂಲಗಳಿಂದ ತಿಳಿದು ಬಂದಿದೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಮೂಡಬಿದ್ರೆ, ಬೆಳ್ತಂಗಡಿ, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಸುಳ್ಯ ಕ್ಷೇತ್ರಗಳಿಗೆ ಹೊಸ ಮುಖಗಳು ಕಾಣಿಸಿಕೊಳ್ಳಲಿದ್ದಾರೆ. ಹೈಕಮಾಂಡ್ ಮೂಲಗಳ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಹಿರಿಯ ನಾಯಕರಿಗೆ ಹೊಸ ಮುಖವನ್ನು ಕಣಕ್ಕೆ ಇಳಿಸಲಿದ್ದೇವೆ. ಇದಕ್ಕೆ ಸಹಕಾರ ನೀಡುವಂತೆ ಗೌಪ್ಯ ಸಂದೇಶವನ್ನು ಹೈಕಮಾಂಡ್ ನಿಂದ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಈ ಬಾರಿ ಗೆಲುವು ದಾಖಲಿಸಲು ಹೊಸ ಮುಖಗಳನ್ನು ಕಣಕ್ಕೆ ಇಳಿಸಬೇಕು ಅನ್ನೋದು ಕಾಂಗ್ರೆಸ್ ಆಂತರಿಕ ಸಮೀಕ್ಷೆಯಿಂದ ಬಯಲಾಗಿದೆ. ಇದೇ ಕಾರಣಕ್ಕೆ ಈ ಬಾರಿ ಹೊಸ ಮುಖಗಳಿಗೆ ಹಿರಿಯರು ಸ್ಥಾನ ಬಿಟ್ಟು ಕೊಡಬೇಕು ಅನ್ನುವ ಆಗ್ರಹ ಕೇಳಿ ಬಂದಿದೆ. ಅಷ್ಟೇ ಅಲ್ಲದೆ ಈ ಕುರಿತು ಕಳೆದ ಎರಡು ವರ್ಷಗಳಿಂದಲೂ ಮಾಜಿ ಸಚಿವ ಅಭಯಚಂದ್ರ ಜೈನ್ ಆಗ್ರಹಿಸುತ್ತಾ ಬಂದಿದ್ದಾರೆ. ಜೊತೆಗೆ ತಮ್ಮ ಸ್ಥಾನವನ್ನು ಈಗಾಗಲೇ ಬಿಟ್ಟುಕೊಟ್ಟಿದ್ದಾರೆ.

ದಕ್ಷಿಣ ಕನ್ನಡ ಕಾಂಗ್ರೆಸ್ ವಲಯದಲ್ಲಿ ಹೊಸ ಮುಖಗಳಿಗೆ ಆದ್ಯತೆ ನೀಡಬೇಕು, ಅಲ್ಲದೇ ಎಲ್ಲಾ ಕ್ಷೇತ್ರಗಳಲ್ಲಿ ಹೊಸ ಮುಖಗಳನ್ನು ಕಣಕ್ಕೆ ಇಳಿಸಬೇಕೆಂಬ ಆಗ್ರಹ ಕೇಳಿ ಬರುತ್ತಿದೆ.ಈ ನಡುವೆ ಹಳೆ ಮುಖಗಳಿಗೆ ಟಿಕೆಟ್ ನೀಡಿದರೆ ದಕ್ಷಿಣ ಕನ್ನಡದಲ್ಲಿ ಮತ್ತೆ ಬಿಜೆಪಿಯು ಹಿಂದುತ್ವದ ಅಸ್ತ್ರವನ್ನೇ ಉಪಯೋಗಿಸಿ ಏಳು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಸುಲಭವಾಗಿ ಸೋಲಿಸಲಿದೆ ಅನ್ನೋದು ಸಮೀಕ್ಷೆಯಿಂದ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಮೀಕ್ಷೆಯ ವರದಿಯನ್ನೇ ಗಂಭೀರವಾಗಿ ಪರಿಗಣಿಸಿದೆ ಎನ್ನಲಾಗುತ್ತಿದೆ.