ಮಲೆನಾಡಿನಲ್ಲಿ ಕೆ.ಎಪ್.ಡಿ ಪತ್ತೆ. ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

ರಾಜ್ಯ

ಮಲೆನಾಡಲ್ಲಿ ಈ ವರ್ಷದ ಮೊದಲ ಕೆಎಫ್ ಡಿ (ಮಂಗನಕಾಯಿಲೆ) ಪತ್ತೆಯಾಗಿದೆ. ಹೌದು, ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಮೂಲದ ವ್ಯಕ್ತಿಯಲ್ಲಿ ಕೆಎಫ್ ಡಿ ಪತ್ತೆಯಾಗಿದೆ. ಇದರಿಂದಾಗಿ ಮಲೆನಾಡಿನಲ್ಲಿ ಮತ್ತೆ ಮಂಗನಕಾಯಿಲೆ ಭೀತಿ ಆವರಿಸಿದೆ. ಹೀಗಾಗಿ ಜಿಲ್ಲಾದ್ಯಂತ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್ ಆಗಿದೆ.

ಕೊಪ್ಪದಲ್ಲಿದ್ದ ಕೆಲಸ ಮಾಡುತ್ತಿದ್ದ ವ್ಯಕ್ತಿಯಲ್ಲಿ ಮಂಗನಕಾಯಿಲೆ ಪತ್ತೆಯಾಗಿದೆ. ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಟಿಕ್ಸ್ ಕಳುಹಿಸಿತ್ತು. ಇದೀಗ ವ್ಯಕ್ತಿಯಲ್ಲಿ ಕೆಎಫ್ ಡಿ ಪತ್ತೆಯಾಗಿದ್ದು ದೃಢಪಟ್ಟಿದೆ.

ಇದು ಈ ವರ್ಷದ ಮೊದಲ ಕೆಎಫ್ ಡಿ ಪ್ರಕರಣವಾಗಿದೆ. ಹೀಗಾಗಿ ಮಲೆನಾಡಿನಲ್ಲಿ ಮತ್ತೆ ಮಂಗನಕಾಯಿಲೆ ಭೀತಿ ಆವರಿಸಿದೆ. ಕೆಎಫ್ ಡಿ ಪತ್ತೆಯಾದ ವ್ಯಕ್ತಿ ಇದ್ದ ಸ್ಥಳ ಹಾಗೂ ಸುತ್ತಮುತ್ತ ಪ್ರತಿ ವ್ಯಕ್ತಿಗಳ ಬಗ್ಗೆ ನಿಗಾ ವಹಿಸಲಾಗಿದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲೂ ಕೆಎಫ್ ಡಿ ಭೀತಿ ಆವರಿಸಿದೆ.