ಮತೀಯ ಹತ್ಯೆಗಳನ್ನು ಸಮರ್ಥಿಸಿ ಶರಣ್ ಪ್ರಚೋದನಕಾರಿ ಹೇಳಿಕೆ: ಪೊಲೀಸರು ಕ್ರಮ ಕೈಗೊಳ್ಳಬೇಕು: ಕೆ.ಅಶ್ರಫ್ ಮುಸ್ಲಿಂ ಒಕ್ಕೂಟ

ರಾಜ್ಯ

ವಿ.ಎಚ್.ಪಿ ಪ್ರೇರಿತ ತುತ್ತೂರಿ ಸೇವಕ ಶರಣ್ ನ ಮೂಲಕ,ಮುಂದಿನ ತನ್ನ ರಾಜಕೀಯ ಅಸ್ತಿತ್ವದ ಬೆಳವಣಿಗೆಗಳ ನ್ನು ಗುರಿಯಾಗಿಸಿ ‘ ಬಜರಂಗದಳ ಶೌರ್ಯ ‘ ಯಾತ್ರೆ ಹೆಸರಿನಲ್ಲಿ ಕರ್ನಾಟಕದಾದ್ಯಂತ ಮತೀಯ ಪ್ರಚೋದನೆಯನ್ನು ಸೃಷ್ಟಿಸುವ ಹುನ್ನಾರದಿಂದ ಪ್ರಚೋದನಕಾರಿ ಹೇಳಿಕೆಗಳಿಗೆ ನಾಂದಿ ಹಾಡಲಾಗುತ್ತಿದೆ. ಅದರ ಭಾಗವಾಗಿ ಗುಜರಾತಿನ ಮುಸ್ಲಿಮರ ಹತ್ಯೆ,ಸುರತ್ಕಲ್ ಫಾಝಿಲ್ ಹತ್ಯೆ, ತುಮಕೂರಿನಲ್ಲಿ ಸಂಭಾವ್ಯ ಗಲಭೆಗೆ ಪ್ರಚೋದನೆ, ಒಬ್ಬನನ್ನು ಮುಟ್ಟಿದರೆ ಹತ್ತು ಜನ ಆಸ್ಪತ್ರೆಯಲ್ಲಿ ಇರುತ್ತಾರೆ ಎಂಬ ಸಂಭಾವ್ಯ ಹಲ್ಲೆಗೆ ಪ್ರಚೋದನೆ, ‘ ನಮ್ಮ ಕೈಯಲ್ಲಿ ತಲವಾರು ಇರುತ್ತದೆ ‘ ಎಂಬ ಹೇಳಿಕೆಯಿಂದ ಅಪರಾಧಕ್ಕೆ ಪ್ರೇರಣೆ ಹೊಂದುವಂತಹ ಹೇಳಿಕೆಯನ್ನು ಸಾರ್ವಜನಿಕವಾಗಿ ಮತ್ತು ಮುಕ್ತವಾಗಿ ಕಾನೂನಿನ ಏಜೆಂಟ್ ಗಳ ಸಮಕ್ಷಮವೇ ನೀಡಿರುತ್ತಾರೆ. ಶರಣ್ ಎಂಬ ವಿ.ಎಚ್.ಪಿ ಏಜೆಂಟ್ ನ ಮುಖಾಂತರ ಕರ್ನಾಟಕದಾದ್ಯಂತ ಈ ರೀತಿಯಲ್ಲಿ ಗಲಭೆಗೆ ಮುನ್ನುಡಿ ಬರೆಯಲಾಗುತ್ತದೆ. ಮುಂದಿನ ದಿನಗಳಲ್ಲಿ ಗಲಭೆ ಸ್ಫೋಟ ಗೊಂಡರೆ ಅದಕ್ಕೆ ಮುಖ್ಯ ಕಾರಣ ಈ ಹೇಳಿಕೆ ಗಳಿಂದಲೆ ಎಂಬುದನ್ನು ವಿವೇಚಿಸಿ ಪೊಲೀಸರು ತಕ್ಷಣ ಪ್ರಕರಣ ದಾಖಲಿಸ ಬೇಕಿದೆ. ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಶರಣ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತಿದೆ. ಇದರ ವಿರುದ್ಧ ಪ್ರತಿಭಟನೆ ಅನಿವಾರ್ಯ ವಾಗಲಿದೆ.