ರಾಜ್ಯದ 17 ನದಿಗಳ ನೀರು ನೇರವಾಗಿ ಕುಡಿಯಲು ಯೋಗ್ಯವಲ್ಲ: ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಪೋಟಕ ವರದಿ

ರಾಜ್ಯ

ದ.ಕ ಜಿಲ್ಲೆಯಲ್ಲಿ ಹರಿಯುವ ನೇತ್ರಾವತಿ, ಕುಮಾರಧಾರ ಸೇರಿ

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ರಾಜ್ಯದ 17 ನದಿಗಳು ಕಲುಷಿತವಾಗಿದ್ದು, ಈ ನದಿಗಳ ನೀರು ನೇರವಾಗಿ ಕುಡಿಯಲು ಯೋಗ್ಯವಲ್ಲ ಎಂದು ವರದಿಯಲ್ಲಿ ಸ್ಫೋಟಕ ಮಾಹಿತಿ ನೀಡಿದೆ.

ಮಾಲಿನ್ಯ ನಿಯಂತ್ರಣ ಮಂಡಳಿ ರಾಜ್ಯದ 17 ನದಿಗಳ ಹರಿವಿನಲ್ಲಿ ವಿವಿಧ ಜಿಲ್ಲೆಗಳಲ್ಲಿ 103 ತಪಾಸಣೆ ಕೇಂದ್ರಗಳನ್ನು ಸ್ಥಾಪಿಸಿದ್ದು, ಅಲ್ಲಿಂದ ನೀರಿನ ಮಾದರಿ ಸಂಗ್ರಹಿಸಿ ಟೆಸ್ಟ್ ಮಾಡಿದ್ದು ಕಾವೇರಿ ನದಿ, ಕಬಿನಿ ನದಿ, ಕಗಿನಿ ನದಿ, ಕಾಳಿ ನದಿ, ಕೃಷ್ಣ ನದಿ, ಅಸಂಗಿ ಕೃಷ್ಣ ನದಿ, ಶಿಂಷಾ ನದಿ, ಭೀಮಾ ನದಿ, ನೇತ್ರಾವತಿ ನದಿ, ಅರ್ಕಾವತಿ ನದಿ, ಲಕ್ಷ್ಮಣ ತೀರ್ಥ ನದಿ, ಮಲಪ್ರಭಾ ನದಿ, ತುಂಗಭದ್ರಾ ನದಿ, ಕುಮಾರಧಾರ ನದಿ, ತುಂಗಾ ನದಿ, ಯಗಚಿ ನದಿಗಳ ನೀರು ನೇರವಾಗಿ ಕುಡಿಯೋಕೆ ಯೋಗ್ಯವಲ್ಲ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ.