ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ,ಮಂಗಳೂರಿನ ಮೂವರು ಸ್ಥಳದಲ್ಲೇ ಮೃತ್ಯು

ಅಂತಾರಾಷ್ಟ್ರೀಯ

ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ  ರಿಯಾದಿನ  ಖುರೈಸ್ ರಸ್ತೆಯ ಬಳಿ ನಡೆದಿದೆ.

ಹಳೆಯಂಗಡಿ‌ ಕದಿಕೆ ನಿವಾಸಿ ರಿಝ್ವಾನ್, ಅಕೀಲ್, ನಾಸಿರ್, ಶಿಹಾಬ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ನಾಲ್ವರು ಕಾರಿನಲ್ಲಿ ಹೋಗುತ್ತಿದ್ದಾಗ ಖುರೈಸ್ ರಸ್ತೆಯ ಬಳಿ ಒಂಟೆಗೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.ಕಾರಿನಲ್ಲಿದ್ದವರು SAQCO ಎಂಬ ಕಂಪೆನಿಯಲ್ಲಿ ನೌಕರರಾಗಿದ್ದರು ಎನ್ನಲಾಗಿದೆ. ಕಾರಿನಲ್ಲಿದ್ದ ಓರ್ವ ಬಾಂಗ್ಲಾದೇಶದ ಯುವಕ ಕೂಡ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಅಕೀಲ್ ಅವರು ಮಂಗಳೂರಿನ ಬೋಳಾರ್ ನಿವಾಸಿಯಾಗಿದ್ದು, ರಿಝ್ವಾನ್ ಹಳೆಯಂಗಡಿ ಕದಿಕೆ ನಿವಾಸಿ ಎಂದು ತಿಳಿದು ಬಂದಿದೆ. ಮೃತರ ಪೈಕಿ ಓರ್ವ ಬಾಂಗ್ಲದೇಶದವನು ಎಂದು ತಿಳಿದುಬಂದಿದೆ. ಮೃತದೇಹಗಳನ್ನು ಅಲ್ ಹಸ್ಸಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಸಂತ್ರಸ್ತ ಕುಟುಂಬವನ್ನು ಸಂಪರ್ಕಿಸಿ ಮಾಹಿತಿ ನೀಡಲಾಗಿದೆ.ಹಳೆಯಂಗಡಿ ಕದಿಕೆ ಕೇಂದ್ರ ಜುಮಾ ಮಸೀದಿ ಬಳಿಯ ನಿವಾಸಿ ರಿಝ್ವಾನ್ ಅವರು, 4 ತಿಂಗಳ ಹಿಂದಷ್ಟೇ ಉದ್ಯೋಗ ನಿಮಿತ್ತ ಸೌದಿ ಅರೆಬಿಯಾಕ್ಕೆ ತೆರಳಿದ್ದರು. ಇವರು ಬದ್ರುದ್ದೀನ್ ಮತ್ತು ಅಲೀಮಾ ದಂಪತಿಯ ನಾಲ್ಕು ಮಂದಿ ಮಕ್ಕಳ ಪೈಕಿ ಮೂವರು ಪುತ್ರಿಯರು ಹಾಗೂ ಏಕೈಕ ಪುತ್ರನಾಗಿದ್ದಾರೆ‌.