ವಾಮದಪದವು ಕಾಲೇಜಿನ ಉಪನ್ಯಾಸಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕರಾವಳಿ

ಕಾಲೇಜು ಉಪನ್ಯಾಸಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಡಿ ಎಂಬಲ್ಲಿ ನಡೆದಿದೆ.34 ವರ್ಷ ವಯಸ್ಸಿನ ಶಿಕ್ಷಕಿ ಅಮಿತಾ ಆತ್ಮಹತ್ಯೆ ಮಾಡಿಕೊಂಡವರು. ಇವರಿಗೆ ಓರ್ವಳು ಪುತ್ರಿ ಇದ್ದಾಳೆ. ಅಮಿತಾ ಅವರಿಗೆ ವಿವಾಹವಾಗಿ 12 ವರ್ಷಗಳಾಗಿದ್ದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ತಮ್ಮ ಬೆಡ್ ರೂಮ್ ನ ಫ್ಯಾನ್ ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ನಕಾರಣ ತಿಳಿದು ಬಂದಿಲ್ಲ. ಮುಲ್ಕಿ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.ಶಿಕ್ಷಕಿ ಅಮಿತಾರವರು ವಾಮದಪದವು ಕಾಲೇಜಿನಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದರು.