ದ.ಕನ್ನಡ ಜಿಲ್ಲೆಯವರು ಕಟ್ಟಿ ಬೆಳೆಸಿದರು,ಗುಜರಾತಿನ ಮಾರ್ವಾಡಿಗಳು ನುಂಗಿ ನೀರು ಕುಡಿದರು:ಸಿದ್ದರಾಮಯ್ಯ

ರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಯ ಬುದ್ದಿವಂತರು ವಿಜಯಾ,ಕೆನರಾ,ಸಿಂಡಿಕೇಟ್, ಕಾರ್ಪೋರೇಶನ್ ಗಳಂತಹಾ ಬೃಹತ್ತ್ ಬ್ಯಾಂಕ್‌ಗಳನ್ನು ಕಟ್ಟಿ ಬೆಳೆಸಿದರು. ಗುಜರಾತಿನ ಮಾರ್ವಾಡಿಗಳು ಈ ಬ್ಯಾಂಕುಗಳನ್ನು ನುಂಗಿ ನೀರು ಕುಡಿದರು ಎಂದು ಅಮಿತ್‌ ಷಾ ಹೇಳಿಕೆ ವಿರುದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಪುತ್ತೂರಿನಲ್ಲಿ ಶನಿವಾರ ನಡೆದ ಕೇಂದ್ರ ಅಡಿಕೆ ಮತ್ತು ಕೊಕ್ಕೊ ಮಾರುಕಟ್ಟೆ ಮತ್ತು ಸಂಸ್ಕರಣೆ ಸಹಕಾರಿ ಸಂಸ್ಥೆ ‘ಕ್ಯಾಂಪ್ಕೊ’ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅಮಿತ್ ಶಾ, ಗುಜರಾತ್‌ ಜನರು ಅಡಿಕೆ ತಿಂದರೆ, ದಕ್ಷಿಣ ಕನ್ನಡದ ಜನ ಅಡಿಕೆ ಬೆಳೆಯುತ್ತಾರೆ ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಅವರು, ದಕ್ಷಿಣ ಕನ್ನಡದವರು ವಿಜಯಾ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್‌ಗಳನ್ನು ಕಟ್ಟಿ ಬೆಳೆಸಿದರು. ಗುಜರಾತಿನವರು ಈ ಬ್ಯಾಂಕುಗಳನ್ನು ನುಂಗಿ ನೀರು ಕುಡಿದರು. ನಮ್ಮವರಿಗೆ ಕಟ್ಟುವುದು, ಬೆಳೆಸುವುದು ಗೊತ್ತು. ನಿಮಗೆ ಮಾರುವುದು, ಮುಳುಗಿಸುವುದು ಮಾತ್ರ ಗೊತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.