ಕರ್ನಾಟಕ ವಿಧಾನಸಬಾ ಚುನಾವಣೆಗೆ ಇನ್ನೇನು ಕೆಲವೇ ವಾರಗಳು ಮಾತ್ರ ಬಾಕಿಯಿವೆ. ಇದರ ಬೆನ್ನಲ್ಲೇ ರಾಜ್ಯ ಬಿಜೆಪಿ ಸರ್ಕಾರ ತನ್ನ ಕೊನೆಯ ಬಜೆಟ್ ಮಂಡಿಸುತ್ತಿದೆ. ಚುನಾವಣಾ ಹಿನ್ನಲೆಯಲ್ಲಿ ಜನಪ್ರಿಯ ಘೋಷಣೆಗಳು ಬಜೆಟ್‌ನಲ್ಲಿ ಇರಲಿವೆ ಎಂಬ ಮಾತುಗಳು ಕೇಳಿಬರುತ್ತಿದೆ. ಆದರೆ ಜನಪ್ರಿಯ ಬಜೆಟ್ ಬದಲು ಜನಪರ ಬಜೆಟ್ ಮಂಡಿಸಲು ಸಿಎಂ ಬೊಮ್ಮಾಯಿ ಹಾಗೂ ಬಿಜೆಪಿ ಒಲವು ತೋರುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಮ್ಮ 2ನೇ ಬಜೆಟ್‌ನಲ್ಲಿ ಎಲ್ಲಾ ವರ್ಗದ ಹಾಗೂ ಎಲ್ಲಾ ಕ್ಷೇತ್ರಕ್ಕೆ ನ್ಯಾಯ ಒದಗಿಸುವ ಪ್ರಯತ್ನ ಮಾಡುವ ಸಾಧ್ಯತೆ ಇದೆ. ಈ ಬಾರಿಯ ಬಜೆಟ್ ಗಾತ್ರ ಸರಿಸುಮಾರು 3 ಲಕ್ಷ ಕೋಟಿ ರೂಪಾಯಿ ತಲುಪಲಿದೆ. ಕಳೆದ ಬಾರಿ 2.65 ಲಕ್ಷ ಕೋಟಿ ರೂಪಾಯಿ ಬಜೆಟ್ ಮಂಡಿಸಲಾಗಿತ್ತು. ಶಿಕ್ಷಣ, ಕೈಗಾರಿಕೆ, ಆರೋಗ್ಯ, ತಂತ್ರಜ್ಞಾನ, ಉದ್ಯೋಗವಕಾಶ, ಕೃಷಿ ಸೇರಿದಂತೆ ಪ್ರತಿ ಕ್ಷೇತ್ರಗಳು ಈ ಬಾರಿಯ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇಟ್ಟಕೊಂಡಿದೆ.
ಕೋವಿಡ್ ಬಳಿಕ ಚೇತರಿಕೆ ಹಾದಿಯಲ್ಲಿ ಸಾಗುತ್ತಿರುವ ಕಾರಣ ಪ್ರತಿ ಕ್ಷೇತ್ರಗಳು ಉತ್ತೇಜನದ ನಿರೀಕ್ಷೆಯಲ್ಲಿದೆ. ಇದರ ಜೊತೆ ಕೇಂದ್ರದ ಸಹಕಾರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಮತ್ತಷ್ಟು ವೇಗ ನೀಡಲು ವಿಶೇಷ ಅನುದಾನ ಘೋಷಿಸುವ ಸಾಧ್ಯತೆ ಇದೆ