ಯುವಕನಿಗೆ ಚೂರಿ ಇರಿದು ಪರಾರಿ

ಕರಾವಳಿ

ಯುವಕನೋರ್ವನಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.ಪಾಣೆಮಂಗಳೂರು ನೆಹರು ನಗರ ನಿವಾಸಿ ಸುಲೈಮಾನ್ ಎಂಬವನಿಗೆ ಆತನ ಸ್ನೇಹಿತ ನಿಸಾರ್ ಚೂರಿ ಇರಿದು ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.

ಸುಮಾರು 1.30 ಗಂಟೆ ವೇಳೆ ಇವರಿಬ್ಬರು ನೆಹರು ನಗರದ ಬಳಿ ಬಂದಿದ್ದು, ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದು ನಿಶಾರ್ ಸುಲೈಮಾನ್ ಗೆ ಚೂರಿಯಿಂದ ಹೊಟ್ಟೆಯ ಭಾಗಕ್ಕೆ ತಿವಿದಿದ್ದಾನೆ ಎನ್ನಲಾಗಿದೆ.ಗಾಯಗೊಂಡ ಸುಲೈಮಾನ್ ನನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ ಭೇಟಿ ನೀಡಿದ್ದಾರೆ