ಸೋಲಿನ ಭೀತಿ,ಮಹಾಮೈತ್ರಿಗೆ ಮುಂದಾದ ಕಾಂಗ್ರೆಸ್

ರಾಷ್ಟ್ರೀಯ

ಸತತ ಎರಡೂ ಲೋಕಸಭೆ ಚುನಾವಣೆಯಲ್ಲಿ ಸೋತಿರುವ ಕಾಂಗ್ರೆಸ್ 2024ರ ಚುನಾವಣೆಯಲ್ಲಿ ಗೆಲುವು ಸಾಧಿಸಲು ಈಗ ಮತ್ತೊಮ್ಮೆ ವಿಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ.ಎರಡೂ ಚುನಾವಣೆಯಲ್ಲಿ ವಿಪಕ್ಷಗಳು ಒಂದಾಗದೇ ಚುನಾವಣೆ ಎದುರಿಸಿದ ಪರಿಣಾಮ ಸೋಲಾಗಿದೆ ಎಂಬ ತೀರ್ಮಾನಕ್ಕೆ ಕಾಂಗ್ರೆಸ್ ಬಂದಿದೆ. ಈ ತಪ್ಪು 2024ರ ಚುನಾವಣೆಯಲ್ಲೂ ನಡೆಯದೇ ಇರಲು ಈಗಲೇ ಮಹಾಮೈತ್ರಿ ಮಾಡಿಕೊಳ್ಳಲು ಚಿಂತನೆ ನಡೆಸಿದೆ.

ಫೆ.24ರಿಂದ ಛತ್ತೀಸ್ಗಢ ರಾಜಧಾನಿ ರಾಯಪುರದಲ್ಲಿ ಮೂರು ದಿನಗಳ ಕಾಲ ಕಾಂಗ್ರೆಸ್ 85ನೇ ಮಹಾಧಿವೇಶನ ನಡೆಯಲಿದ್ದು, ಅಲ್ಲಿ ವಿಪಕ್ಷಗಳ ಮೈತ್ರಿಕೂಟದ ಬಗ್ಗೆ ಮಹತ್ವದ ಚರ್ಚೆಯನ್ನು ನಡೆಸಲು ನಿರ್ಧರಿಸಲಾಗಿದೆ.