ಹದಿಹರೆಯದ ಯುವತಿಯರಲ್ಲಿ ಹೆಚ್ಚಾಗುತ್ತಿದೆ ಗರ್ಭಧಾರಣೆ

ರಾಜ್ಯ

75-80% ಹದಿಹರೆಯದ ಗರ್ಭಧಾರಣೆಯ ಪ್ರಕರಣಗಳಲ್ಲಿ ಬೆಂಗಳೂರಿಗರೇ ಆಗಿದ್ದಾರೆ.

ಬೆಂಗಳೂರಿನ ಸರ್ಕಾರಿ ವಾಣಿವಿಲಾಸ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸುಮಾರು 30% ರಷ್ಟು ಹದಿಹರೆಯದ ಹೆಣ್ಣುಮಕ್ಕಳು ಗರ್ಭಿಣಿಯರಾಗಿರುವ ಕುರಿತು ವರದಿಯಾಗಿದೆ.ಇವುಗಳನ್ನು ಪೋಕ್ಸೊ ಪ್ರಕರಣಗಳೆಂದು ಪರಿಗಣಿಸಲಾಗುತ್ತದೆ.70% ಪ್ರಕರಣಗಳಲ್ಲಿ ಗರ್ಭಧರಿಸಿದವರು ವಿವಾಹಿತರಾಗಿದ್ದಾರೆ.ಪೋಕ್ಸೊ ಕಾಯಿದೆಯು ಮಕ್ಕಳ ಲೈಂಗಿಕ ದೌರ್ಜನ್ಯಕ್ಕೆ ಕಠಿಣ ಶಿಕ್ಷೆಯನ್ನು ಒದಗಿಸುವ ಮೂಲಕ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಮಾಡುತ್ತದೆ.ಇನ್ನು ಈ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿ,ಚಾರ್ಜ್ ಶೀಟ್ ಸಲ್ಲಿಕೆಯಾಗುವವರೆಗೆ ಕನಿಷ್ಠ ಮೂರು ತಿಂಗಳ ಕಾಲ ಜೈಲಿನಲ್ಲೇ ಇರಬೇಕಾಗುತ್ತದೆ.

ಬಾಲ್ಯ ವಿವಾಹವು ಕಾನೂನು ಬಾಹಿರವಾಗಿದ್ದರೂ ವಿಶೇಷವಾಗಿ ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದವರಲ್ಲಿ ಇದು ಹೆಚ್ಚು ಪ್ರಚಲಿತವಾಗಿದೆ. ಈ ಕುರಿತು ವೈದ್ಯಕೀಯ ಅಧೀಕ್ಷಕಿ ಡಾ.ಸಿ.ಸವಿತಾ ಅವರು “ಹದಿಹರೆಯದವರು ಗರ್ಭಧರಿಸಿದ್ದಲ್ಲಿ ಅಪಾಯ ಹೆಚ್ಚಿರುತ್ತದೆ. ಮಗುವಿನ ಅಪೂರ್ಣ ಬೆಳವಣಿಗೆ, ರಕ್ತಹೀನತೆ ಮತ್ತು ಅಪೌಷ್ಟಿಕತೆಯಂತಹ ಸಮಸ್ಯೆಗಳಿಂದ ಸಾವಿನ ಸಾಧ್ಯತೆ ಹೆಚ್ಚು ಇರುತ್ತದೆ ಎಂದಿದ್ದಾರೆ. ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳು ಸೇರಿದಂತೆ ಹೊರ ರಾಜ್ಯಗಳಿಂದಲೂ ರೋಗಿಗಳು ಬರುತ್ತಾರೆ. 75-80% ಹದಿಹರೆಯದ ಗರ್ಭಧಾರಣೆಯ ಪ್ರಕರಣಗಳಲ್ಲಿ ಬೆಂಗಳೂರಿಗರೇ ಆಗಿದ್ದಾರೆ. ಹೆಚ್ಚಿನ ಪ್ರಕರಣಗಳು ಕಡಿಮೆ ಸಾಮಾಜಿಕ ಆರ್ಥಿಕ ಸ್ತರದಿಂದ ಬಂದಿವೆ.