ಕೊಂಚಾರ್ ಶಾಂತಿಗುಡ್ಡೆ ನಿವಾಸಿ ಮಹಮ್ಮದ್ ಸಫ್ವಾನ್,ಲೇಡಿಹಿಲ್ ನಿವಾಸಿ ಲ್ಯಾನ್ಸನ್ ಡೋಡ್ರಿಗಸ್.
ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾದ ಕೊಲೆಯತ್ನ, ಸಾರ್ವಜನಿಕ ಆಸ್ತಿಗೆ ಬೆಂಕಿ, ದೊಂಬಿ, ದರೋಡೆಗೆ ಸಂಚು,ದನ ಕಳ್ಳತನ,ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದಾಖಲಾದ ದನ ಕಳವು,ಕುಂದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಹಿಳೆಯ ಮಾನಭಂಗಕ್ಕೆ ಪ್ರಯತ್ನಿಸಿದ ಪ್ರಕರಣ.ಒಟ್ಟು ಐದಕ್ಕೂ ಹೆಚ್ಚು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಂಚಾರ್ ಶಾಂತಿಗುಡ್ಡೆಯ ನಿವಾಸಿ ಹನೀಫ್ ಎಂಬವರ ಮಗ ಮಹಮ್ಮದ್ ಸಫ್ವಾನ್ ನನ್ನು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಬಜಪೆ ಪೊಲೀಸರು ಹಾಜರುಪಡಿಸಿದ್ದಾರೆ.
ಬಜಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಹಲ್ಲೆಗೆ ಸಂಬಂಧಿಸಿದ ಪ್ರಕರಣದಲ್ಲಿ ಸುಮಾರು ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಂಗಳೂರು ಲೇಡಿಹಿಲ್ ನಿವಾಸಿ ಲ್ಯಾನ್ಸನ್ ಡೋಡ್ರಿಗಸ್ ಎಂಬಾತನನ್ನು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಆರೋಪಿತರಿಗೆ ನ್ಯಾಯಾಂಗ ಬಂಧನ ವಿದಿಸಲಾಗಿದೆ.
ಬಜಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಿವಿಧ ಪ್ರಕರಣಗಳಲ್ಲಿ ನ್ಯಾಯಾಲಯದ ಮುಂದೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳ ಪತ್ತೆಗೆ ಬಲೆ ಬಿಸಿದ ಬಜಪೆ ಠಾಣೆಯ ಪೊಲೀಸ್ ನಿರೀಕ್ಷಕರಾದ ಪ್ರಕಾಶ್ ರವರ ತಂಡ ವಿಳಾಸ ಬದಲಿಸಿ ಬೇರೆ ಬೇರೆ ಕಡೆಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪತ್ತೆ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸುವಲ್ಲಿ ಯಶಸ್ವಿಯಾಗಿದೆ.
ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಶ್ರೀ ಕುಲದೀಪ್ ಕುಮಾರ್ ಆರ್ ಜೈನ್ ರವರ ಮಾರ್ಗದರ್ಶನದಂತೆ, DCP ಗಳಾದ ಅಂಶು ಕುಮಾರ್ ,ದಿನೇಶ್ ಕುಮಾರ್ ರವರ ನಿರ್ದೇಶನದಲ್ಲಿ,ಮಂಗಳೂರು ಉತ್ತರ ಉಪ ವಿಭಾಗದ ACP ಮನೋಜ್ ಕುಮಾರ್ ನಾಯ್ಕ್ ರವರ ನೇತೃತ್ವದಲ್ಲಿ ಬಜಪೆ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಪ್ರಕಾಶ್, ಉಪ-ನಿರೀಕ್ಷಕರಾದ ಪೂವಪ್ಪ,ಗುರುಕಾಂತಿ, ASI ರಾಮ ಪೂಜಾರಿ, ಅಪರಾಧ ಪತ್ತೆ ವಿಭಾಗ ಮತ್ತು ವಾರಂಟ್ ಕರ್ತವ್ಯದ ಸಿಬ್ಬಂದಿಯವರಾದ ರಾಜೇಶ್, ರಶೀದ, ಸುಜನ, ಜಗದೀಶ್, ರೋಹಿತ ಮತ್ತು ಸಂಜೀವ ರವರು ಈ ಪತ್ತೆ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದರು.