ಮಾರ್ಚ್‌ 9ರಂದು ‘ಕರ್ನಾಟಕ ಬಂದ್‌’ಗೆ ಕರೆ ನೀಡಿದ ಕಾಂಗ್ರೆಸ್‌

ರಾಜ್ಯ

ಮಾರ್ಚ್‌ 9 ರಂದು ಕರ್ನಾಟಕದಾದ್ಯಂತ ಬಂದ್‌ಗೆ ಕಾಂಗ್ರೆಸ್‌ ನಾಯಕ ಡಿಕೆ ಶಿವಕುಮಾರ್‌ ಅವರು ಕರೆ ನೀಡಿದ್ದಾರೆ. ಅವರು ಇಂದು ಕೊರಟಗೆರೆಯಲ್ಲಿ ನಡೆದ ಪಾರ್ಟಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಮಾರ್ಚ್ 9ರಂದು ಬೆಳಗ್ಗೆ 9ರಿಂದ ಬೆಳಗ್ಗೆ 11 ಗಂಟೆಯವರೆಗೆ ರಾಜ್ಯಾದ್ಯಂತ ಬಂದ್​ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕರೆ ಕೊಟ್ಟಿದ್ದಾರೆ. 2 ಗಂಟೆ ಕಾಲ ಅಂಗಡಿ ಮುಂಗಟ್ಟು ಮುಚ್ಚಿ ಬಂದ್​ಗೆ ಸಹಕರಿಸಲು ಮನವಿ ಮಾಡಿಕೊಂಡಿದ್ದಾರೆ.

ಬಂದ್ ವೇಳೆ ಯಾರಿಗೂ ತೊಂದರೆ ನೀಡಲ್ಲ. ಶಾಂತಿ ರೀತಿಯಿಂದ ಪ್ರತಿಭಟನೆ ಮಾಡಬೇಕು. ವ್ಯಾಪಾರವನ್ನು ಎರಡು ಗಂಟೆಗಳ‌ ಕಾಲ ಅಂಗಡಿ ಮುಗ್ಗಟ್ಟು ಬಂದ್ ಮಾಡಿ ಬೆಂಬಲ ನೀಡುವಂತೆ ಮನವಿ ಮಾಡಿದರು.ಇನ್ನೂ ಸಮಾರಂಭಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗೈರು ಎದ್ದು ಕಾಣುತಿತ್ತು.ಇದೇ ವೇಳೆ ಕೊರಟಗೆರೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕಾಂಗ್ರೆಸ್‌ ರಾಜೀವ ಭವನ ಕಟ್ಟಡವನ್ನು ಕೂಡ ಲೋಕರ್ಪಾಣೆ ಮಾಡಲಾಯಿತು.