ಕಾಂಗ್ರೆಸ್ ಕರೆ ನೀಡಿದ ನಾಳೆಯ ಕರ್ನಾಟಕ ಬಂದ್ ರದ್ದು.

ರಾಜ್ಯ

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದಿರುವ ಬೆನ್ನಲ್ಲೇ ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿತ್ತು. ಆದರೆ ಕೊನೆ ಕ್ಷಣದಲ್ಲಿ ಕರ್ನಾಟಕ ಬಂದ್ ರದ್ದಾಗಿದೆ.

ಮಾರ್ಚ್ 9 ರಂದು ಬೆಳಿಗ್ಗೆ 9 ರಿಂದ 11 ಗಂಟೆವರೆಗೆ ಸಾಂಕೇತಿಕವಾಗಿ ಬಂದ್ ಆಚರಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕರೆ ಕೊಟ್ಟಿದ್ದರು. ಆದರೆ ಈಗ ಕರ್ನಾಟಕ ಬಂದ್ ರದ್ದಾಗಿದೆ.

ಪಿಯುಸಿ ಪರೀಕ್ಷೆ ಇರುವುದರಿಂದ ಬಂದ್ ಕರೆ ವಾಪಾಸ್ ಪಡೆಯಲು ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗಿದೆ.