ವಿಧಾನ ಸಭಾ ಚುನಾವಣೆ ಕಾಂಗ್ರೇಸ್ ಪಕ್ಷದ 120 ಅಭ್ಯರ್ಥಿಗಳು ಫೈನಲ್; ಮುಂದಿನ ವಾರ ಮೊದಲ ಪಟ್ಟಿ ಬಿಡುಗಡೆ.

ರಾಜ್ಯ

ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ರಾಜ್ಯ ಕಾಂಗ್ರೆಸ್, ಹಾಲಿ ಶಾಸಕರು ಸೇರಿದಂತೆ ಗೆಲ್ಲುವ 120 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮುಂದಿನ ವಾರ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ.ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ರಾಜ್ಯದ 224 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚೆ ನಡೆದಿದ್ದು, ಇದರಲ್ಲಿ ಹಾಲಿ ಶಾಸಕರು ಸೇರಿದಂತೆ ಗೆಲ್ಲುವ ಅಭ್ಯರ್ಥಿಗಳನ್ನು ಒಳಗೊಂಡ 120 ಮಂದಿಯ ಪಟ್ಟಿಯನ್ನು ಸಿದ್ದಪಡಿಸಲಾಗಿದ್ದು, ಮುಂದಿನ ವಾರ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

120 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ಗೆ ಕಳಿಸಲು ಸಿದ್ಧತೆ ನಡೆಸಲಾಗಿದ್ದು, ಮುಂದಿನ ವಾರ ಕಾಂಗ್ರೆಸ್ 120 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸುತ್ತಿರುವ ಕೇಂದ್ರ ಚುನಾವಣಾ ಆಯೋಗ ಮಾರ್ಚ್ 25 ರ ಬಳಿಕ ಚುನಾವಣಾ ದಿನಾಂಕ ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ