ನಾಳೆ ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ರಾಜ್ಯ

ನಾಳೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.ಅವರು ಇಂದು ಆದಿಚುಂಚನಗಿರಿ ಮಠಕ್ಕೆ ತೆರಳಿ ಮಂಗಳವಾರ ಕಾಲಭೈರವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದ್ದರು. ಇದೇ ವೇಳೇ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಭೇಟಿ ನೀಡಿ ದೆಹಲಿಗೆ ವಾಪಸ್ ಆದ ಬಳಿಕ ಅಭ್ಯರ್ಥೀಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಅಂತ ತಿಳಿಸಲಾಗಿತ್ತು, ಅದರಂತೆ ನಾಳೆ ಯುಗಾದಿ ಹಬ್ಬದಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಡಿಕೆಶಿ ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರು ಬಯಸಿದ ಕ್ಷೇತ್ರದಲ್ಲಿ ಸ್ಪರ್ಧೆಗೆ ಅವಕಾಶವಿದೆ. ಕೋಲಾರ, ವರುಣ, ಬಾದಾಮಿ, ಚಾಮುಂಡೇಶ್ವರಿ ಯಾವುದಾದರೂ ಕ್ಷೇತ್ರವನ್ನು ಆಯ್ಕೆ ಮಾಡಲಿ. ಅವರ ಅನುಕೂಲ ನೋಡಿಕೊಂಡು ತೀರ್ಮಾನ ಮಾಡಲಿ. ಎಲ್ಲಿ ತೀರ್ಮಾನ ಮಾಡ್ತಾರೋ ಅಲ್ಲೇ ಅವಕಾಶ ಕೊಡ್ತೀವಿ ಅಂತ ಡಿಕೆಶಿ ಹೇಳಿದ್ದಾರೆ