ಕಾಂಗ್ರೇಸ್ ಕಾರ್ಯಕರ್ತರ ಕುತೂಹಲಕ್ಕೆ ತೆರೆ.!ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮುಂದೂಡಿಕೆ: ಡಿಕೆಶಿ

ರಾಜ್ಯ

ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯನ್ನು ಪಕ್ಷ ಮುಂದೂಡಿದೆ. ಯುಗಾದಿಯಂದು ಮೊದಲ ಪಟ್ಟಿ ಬಿಡುಗಡೆಯಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಬೆಂಗಳೂರಿನಲ್ಲಿ ಈ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪಕ್ಷದ ರಾಷ್ಟ್ರಾಧ್ಯಕ್ಷರು ಹಬ್ಬಕ್ಕಾಗಿ ತಮ್ಮ ಸ್ವಂತ ಊರಿಗೆ ಬಂದಿದ್ದಾರೆ. ಹಾಗಾಗಿ, ಯುಗಾದಿ ದಿನ ಪಟ್ಟಿ ಬಿಡುಗಡೆ ಆಗುವುದಿಲ್ಲ,ಅದ್ದರಿಂದ ಎರಡು ದಿನಗಳಲ್ಲಿ ಪಟ್ಟಿ ಬಿಡುಗಡೆ ಆಗಲಿದೆ ಎಂದಿದ್ದಾರೆ.

ರಾಜಕಾರಣದಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮುಂದೂಡಲ್ಪಟ್ಟಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರೇ ಇದನ್ನು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ, ಯುಗಾದಿ ದಿನದಂದು ಪಟ್ಟಿ ಬಿಡುಗಡೆಯಾಗುತ್ತದೆ ಎಂದು ಕಾತುರದಿಂದ ಕಾಯುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.