ಕಾಂಗ್ರೇಸ್ ಪಕ್ಷದ 2ನೇ ಪಟ್ಟಿ ದೆಹಲಿಗೆ ರೆಡಿ; ಒಬ್ಬರಿಗಿಂತ ಹೆಚ್ಚು ಆಕಾಂಕ್ಷಿಗಳ ಬಗ್ಗೆ ಕೇಂದ್ರ ಸಮಿತಿಯದ್ದೇ ಅಂತಿಮ ತೀರ್ಮಾನ

ರಾಜ್ಯ

*ಮಂಗಳೂರು ಉತ್ತರ- ಮೊಯ್ದಿನ್ ಬಾವಾ / ಇನಾಯತ್ ಅಲಿ. ಮಂಗಳೂರು ದಕ್ಷಿಣ- ಪದ್ಮರಾಜ್ / ಜೆಆರ್ ಲೋಬೋ *

ಕಾಂಗ್ರೆಸ್ ಪಕ್ಷದ 2ನೇ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು, ಅದೇ ಪಟ್ಟಿಯನ್ನು ಹೈಕಮಾಂಡ್ ಗೆ ಕಳುಹಿಸಲು ತೀರ್ಮಾನಿಸಲಾಗಿದೆ. ದೆಹಲಿಯಲ್ಲಿ ಕೇಂದ್ರ ಚುನಾವಣಾ ಸಮಿತಿಯು ಈ ಪಟ್ಟಿಯನ್ನು ಪರಾಮರ್ಶಿಸಿ ಅಂತಿಮ ಪಟ್ಟಿಯೊಂದನ್ನು ಬಿಡುಗಡೆ ಮಾಡುತ್ತದೆ. ಇತ್ತೀಚೆಗೆ, ಕಾಂಗ್ರೆಸ್ 124 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿತ್ತು. ಇದೀಗ 100 ಕ್ಷೇತ್ರಗಳಿಗೆ ಸಂಭಾವ್ಯರ ಹೆಸರುಗಳನ್ನು ಸಿದ್ಧಪಡಿಸಿದೆ ಎಂದು ಹೇಳಲಾಗಿದೆ. ಕೋಲಾರದಿಂದ ಸಿದ್ದರಾಮಯ್ಯನವರ ಹೆಸರು ಅಂತಿಮಗೊಳಿಸಲಾಗಿದೆ.2ನೇ
ಪಟ್ಟಿಯು ಸದ್ಯದಲ್ಲೇ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿಗೆ ರವಾನೆ ಸಾಧ್ಯತೆ.ಒಬ್ಬರಿಗಿಂತ ಹೆಚ್ಚು ಆಕಾಂಕ್ಷಿಗಳ ಕ್ಷೇತ್ರಗಳ ಬಗ್ಗೆ ಕೇಂದ್ರ ಸಮಿತಿಯದ್ದೇ ಅಂತಿಮ ತೀರ್ಮಾನ.

ಕರ್ನಾಟಕ ವಿಧಾನಸಭಾ ಚುನಾವಣೆಗೆ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದ್ದು, ಇದೀಗ ಎರಡನೇ ಹಂತದ ಪಟ್ಟಿ ಬಿಡುಗಡೆಗೆ ಕಸರತ್ತು ನಡೆಯುತ್ತಿದೆ. ಈ ನಿಟ್ಟಿನಲ್ಲಿ ಗುರುವಾರ ಬೆಂಗಳೂರಿನ ಹೊರವಲಯದಲ್ಲಿ ಸ್ಕ್ರೀನಿಂಗ್ ಕಮಿಟಿ ಸಭೆ ನಡೆದಿದ್ದು, ಸಭೆಯಲ್ಲಿ ಟಿಕೆಟ್ ಅಂತಿಮಗೊಳಿಸುವ ನಿಟ್ಟಿನಲ್ಲಿ ಸಾಕಷ್ಟು ಚರ್ಚೆಗಳು ನಡೆದಿವೆ. ಮೊದಲ ಪಟ್ಟಿಯಲ್ಲಿ ಸಿದ್ದರಾಮಯ್ಯರಿಗೆ ವರುಣಾದಿಂದ ಸ್ಪರ್ಧಿಸಲು ಟಿಕೆಟ್ ಘೋಷಣೆಯಾಗಿದ್ದು,2ನೇ ಪಟ್ಟಿಯಲ್ಲಿ ಕೋಲಾರದಿಂದ ಟಿಕೆಟ್ ನೀಡಲು ಹೈಕಮಾಂಡ್ ಒಪ್ಪಿದರೆ, ಅಲ್ಲಿಗೆ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಸಿದ್ದರಾಮಯ್ಯನವರ ಕನಸು ನನಸಾಗಲಿದೆ.

ಎರಡನೇ ಪಟ್ಟಿಯಲ್ಲಿ ಸುಮಾರು 75 ಅಭ್ಯರ್ಥಿಗಳ ಹೆಸರು ಬಿಡುಗಡೆ ಮಾಡುವ ಸಾಧ್ಯತೆ ಇದ್ದು, ಆ ಪಟ್ಟಿಯನ್ನು ಕರ್ನಾಟಕದ ಸ್ಕ್ರೀನಿಂಗ್ ಸಮಿತಿಯು, ಕಾಂಗ್ರೆಸ್ ಹೈಕಮಾಂಡ್ ನ ಕೇಂದ್ರ ಚುನಾವಣಾ ಸಮಿತಿಗೆ ಕಳಿಸುತ್ತದೆ. ಕೇಂದ್ರ ಚುನಾವಣಾ ಸಮಿತಿಯ ಸಭೆಯ ಬಳಿಕ ಹೆಸರು ಅಂತಿಮಗೊಳ್ಳಲಿದೆ. ಸಾಕಷ್ಟು ಆಕಾಂಕ್ಷಿಗಳು ಇರುವ ಹಿನ್ನೆಲೆಯಲ್ಲಿ ಅಳೆದು ತೂಗಿ ಪಟ್ಟಿಯನ್ನು ಅಂತಿಮಗೊಳಿಸಲು ನಿರ್ಧರಿಸಲಾಗಿದೆ. ಆದರೆ, ಗುರುವಾರ ಸಂಜೆಯಾದರೂ ಕಲಬುರಗಿ ದಕ್ಷಿಣ, ಬೆಂಗಳೂರು ದಕ್ಷಿಣ ಹಾಗೂ ಉಡುಪಿ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಫೈನಲ್ ಆಗಿರಲಿಲ್ಲ. ಇನ್ನು, ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಗಳ ಹೆಸರುಗಳು ಫೈನಲ್ ಆಗಿರಲಿಲ್ಲ. ಅಲ್ಲಿ, ಯೋಗೇಶ್ವರ್ ಅವರು ಕಾಂಗ್ರೆಸ್ ಸೇರ್ಪಡೆಯಾದರೆ ಅವರಿಗೆ ಚನ್ನಪಟ್ಟಣದಲ್ಲಿ ಟಿಕೆಟ್ ಸಿಗುವ ಸಾಧ್ಯತೆಗಳು ದಟ್ಟವಾಗಿವೆ.

ಈಗಾಗಲೇ ಕಾಂಗ್ರೆಸ್ 124 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಇನ್ನು 100 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಬೇಕಿದ್ದು, ಅದನ್ನು 2ನೇ ಪಟ್ಟಿಯಲ್ಲೇ ಘೋಷಿಸಲು ತೀರ್ಮಾನಿಸಲಾಗಿದೆ. ಮೇಲುಕೋಟೆಯಲ್ಲಿ ರೈತ ಸಂಘದ ಅಭ್ಯರ್ಥಿಯಾಗಿರುವ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಬೆಂಬಲ ನೀಡಲು ನಿರ್ಧರಿಸಲಾಗಿದೆ. ಉಳಿದಂತೆ, ಎಲ್ಲಾ ನೂರು ಕ್ಷೇತ್ರಗಳ ಪೈಕಿ ಎರಡನೇ ಹಂತದ ಪಟ್ಟಿಯಲ್ಲಿ ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸ್ಸು ಮಾಡುವ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಕಳುಹಿಸಲಾಗಿದೆ.ಅ ಪಟ್ಟಿಯಲ್ಲಿ
ಕಾರ್ಕಳದಿಂದ ಉದಯ ಕುಮಾರ್ ಶೆಟ್ಟಿಯವರ ಹೆಸರು ಅಂತಿಮಗೊಳಿಸಲಾಗಿದೆ.
ಪುತ್ತೂರು- ಶಕುಂತಲಾ ಶೆಟ್ಟಿ ಅಥವಾ ಅಶೋಕ್ ರೈ. ಮಂಗಳೂರು ಉತ್ತರ- ಮೊಯ್ದಿನ್ ಬಾವಾ ಅಥವಾ ಇನಾಯತ್ ಅಲಿ. ಮಂಗಳೂರು ದಕ್ಷಿಣ- ಪದ್ಮಾರಾಜ್ ಅಥವಾ ಜೆಆರ್ ಲೋಬೋ ಈ ಕ್ಷೇತ್ರಗಳಿಂದ ತಲಾ ಇಬ್ಬರ ಹೆಸರುಗಳನ್ನು ಅಂತಿಮ ಗೊಳಿಸಿ ಕೇಂದ್ರದ ಹೈಕಮಾಂಡಿಗೆ ಕಳುಹಿಸಲಾಗಿದೆ.ಅಲ್ಲಿ ಕೊನೆಗಳಿಗೆಯಲ್ಲಿ ಯಾರ ಹೆಸರು ಅಂತಿಮಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಪ್ರತಿ ಕ್ಷೇತ್ರಕ್ಕೆ ಇಬ್ಬರಿಗಿಂತ ಹೆಚ್ಚು ಆಕಾಂಕ್ಷಿಗಳಿರುವ ಕಾರಣ ಈ ಹೆಸರುಗಳನ್ನು ಮೊದಲ ಪಟ್ಟಿಯಲ್ಲಿ ಸೇರಿಸಲಾಗಿಲ್ಲ ಮತ್ತು ಬಂಡಾಯ ತಪ್ಪಿಸಲು ಈ ಸ್ಥಾನಗಳನ್ನು ಬಾಕಿ ಇರಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.ಕನಿಷ್ಠ 60 ಸ್ಥಾನಗಳಲ್ಲಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಬೆಂಬಲಿಗರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಪಕ್ಷದ ಇಬ್ಬರೂ ವರಿಷ್ಠರು ತಮ್ಮ ತಮ್ಮ ಬೆಂಬಲಿಗರಿಗೆ ಟಿಕೆಟ್ ಪಡೆಯಲು ತೀವ್ರ ಚೌಕಾಸಿ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಇಬ್ಬರು ಅಕಾಂಕ್ಷಿಗಳಿರುವ ಕ್ಷೇತ್ರದ ಅಭ್ಯರ್ಥಿಯ ಹೆಸರುಗಳನ್ನು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಲಾಗುವುದು ಮತ್ತು ದೆಹಲಿಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ನಿರೀಕ್ಷಿಸಲಾಗಿದೆ