ಎಪ್ರಿಲ್ 13 ರ ಒಳಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌.?

ರಾಜ್ಯ

ಬಹುನಿರೀಕ್ಷಿತ ಬಿಜೆಪಿಯ ಅಭ್ಯರ್ಥಿಗಳ ಪಟ್ಟಿ ಎಪ್ರಿಲ್ 10 ಹಾಗೂ 13ಕ್ಕೆ ಎರಡು ಕಂತಿನಲ್ಲಿ ಪ್ರಕಟಗೊಳ್ಳುವುದು ಈಗ ಬಹುತೇಕ ಅಧಿಕೃತಗೊಂಡಿದೆ.ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ನಡೆಯುತ್ತಿದ್ದ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಬುಧವಾರ ಮುಕ್ತಾಯಗೊಂಡಿದ್ದು, ಹಾಲಿ ಶಾಸಕರೂ ಸೇರಿ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೂ ತಲಾ ಮೂವರು ಆಕಾಂಕ್ಷಿಗಳನ್ನು ಹೊಂದಿರುವ ಸಂಭಾವ್ಯರ ಪಟ್ಟಿಯೊಂದಿಗೆ ಬಿಜೆಪಿ ಚುನಾವಣ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌ ಬುಧವಾರ ತಡರಾತ್ರಿಯೇ ದಿಲ್ಲಿಗೆ ಪ್ರಯಾಣ ಬೆಳೆಸಿದ್ದಾರೆ.

ಶುಕ್ರವಾರ ಮಧ್ಯಾಹ್ನ ಬಿಜೆಪಿಯ ಹಿರಿಯ ನಾಯಕರು ಹಾಗೂ ಟಿಕೆಟ್‌ ಆಕಾಂಕ್ಷಿಗಳು ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಂಸದೀಯ ಮಂಡಳಿ ಹಾಗೂ ಚುನಾವಣ ಸಮಿತಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಕೂಡಾ ದಿಲ್ಲಿಗೆ ತೆರಳಲಿದ್ದು, ಎ. 8ರಿಂದ 10ರವರೆಗೆ ಅಲ್ಲೇ ವಾಸ್ತವ್ಯ ಇರಲಿದ್ದಾರೆ.ಸಿಎಂ ಬೊಮ್ಮಾಯಿ ಅವರ ಪರಿಷ್ಕೃತ ಪ್ರವಾಸ ಪಟ್ಟಿ ಸಿದ್ಧವಾಗಿದ್ದು, ಶುಕ್ರವಾರ ಮಧ್ಯಾಹ್ನ 2.30ಕ್ಕೆ ದಿಲ್ಲಿಗೆ ತೆರಳಲಿದ್ದಾರೆ. ಗೆಲ್ಲುವ ಮಾನದಂಡದ ಆಧಾರದ ಮೇಲೆ ಪಟ್ಟಿ ಬಿಡುಗಡೆಗೊಳ್ಳಲಿದೆ ಎನ್ನಲಾಗಿದೆ