5 ಕ್ಷೇತ್ರಗಳ ಟಿಕೆಟ್‌ ವಿಷಯದಲ್ಲಿ ಡಿಕೆಸಿ,ಸಿದ್ದು ನಡುವೆ ಮೂಡದ ಒಮ್ಮತ. ಕಾಂಗ್ರೆಸ್‌ನ 30 ಅಭ್ಯರ್ಥಿ ಪಟ್ಟಿ ಅಂತಿಮ

ರಾಜ್ಯ

ಕಾಂಗ್ರೇಸ್ ಪಕ್ಷ ಬಾಕಿ ಉಳಿಸಿಕೊಂಡಿರುವ 58 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪಕ್ಷದಲ್ಲಾದ ಅಭ್ಯರ್ಥಿಗಳ ಪಟ್ಟಿಯ ಹಿನ್ನೆಲೆಯಲ್ಲಿ ಆಗಿರುವ ಬೆಳವಣಿಗೆ ಗಮನಿಸಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.ಸೋಮವಾರ ಹಾಗೂ ಮಂಗಳವಾರ ಹೊಸದಿಲ್ಲಿಯಲ್ಲಿ ನಡೆದ ಕಾಂಗ್ರೆಸ್‌ ನಾಯಕರ ಸರಣಿ ಸಭೆ ಬಳಿಕ ಈ ತೀರ್ಮಾನಕ್ಕೆ ಬರಲಾಗಿದೆ.ಬಾಕಿ 58 ಕ್ಷೇತ್ರಗಳ ಪೈಕಿ ಬಹುತೇಕ 30 ಕ್ಷೇತ್ರಗಳಿಗೆ ಕಣಕ್ಕಿಳಿಸುವ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ.ತೀವ್ರ ಸಮಸ್ಯೆಯಾಗಿರುವ 28 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಕೊನೆಘಳಿಗೆಯಲ್ಲಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ.

ಬಾಕಿ ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವುದಕ್ಕೆ ಹೈಕಮಾಂಡ್‌ ಸೂಚನೆ ಮೇರೆಗೆ ಹೊಸದಿಲ್ಲಿಗೆ ತೆರಳಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ ಬಳಿಕ 30 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಗೆ ಒಮ್ಮತ ಮೂಡಿದೆ.ಆದರೂ ಐದು ಕ್ಷೇತ್ರಗಳ ಟಿಕೆಟ್‌ ವಿಷಯದಲ್ಲಿ ಮಾತ್ರ ಡಿ.ಕೆ ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ನಡುವೆ ಒಮ್ಮತ ಮೂಡದ ಕಾರಣ ಮತ್ತೆ ಮುಂದೂಡಲ್ಪಟ್ಟಿದೆ.