ಚೆಕ್ ಬೌನ್ಸ್ ,ದತ್ತಾ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

ರಾಜ್ಯ

ಮಾಜಿ ಶಾಸಕ ಹಾಗೂ ಜೆಡಿಎಸ್ ಪಕ್ಷದ ಕಡೂರು ವಿಧಾನ ಸಭಾಕ್ಷೇತ್ರದ ಅಭ್ಯರ್ಥಿ ವೈ.ಎಸ್.ವಿ ದತ್ತಾ ಅವರಿಗೆ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಆದೇಶಿದೆ. ಚೆಕ್ ಬೌನ್ಸ್ ಆರೋಪಕ್ಕೆ ಸಂಬಂಧಿಸಿದಂತೆ ಸಿ.ಎಸ್ ಸೋಮೇಗೌಡ ಸಲ್ಲಿಸಿದ್ದ ಖಾಸಗಿ ದೂರು ವಿಚಾರಣೆ ನಡೆಸಿದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಬಂಧನ ರಹಿತ ವಾರಂಟ್ ಜಾರಿ ಮಾಡಿದ್ದಾರೆ. ಏ.26ರಂದು ದತ್ತವರನ್ನು ನ್ಯಾಯಾಲಯಕ್ಕೆ ಹಾಜರಿ ಪಡಿಸುವಂತೆ ಸೂಚನೆ ನೀಡಿದ್ದಾರೆ.

ದತ್ತಾ ಏಪ್ರಿಲ್ 15ರಂದು ದೂರುದಾರರಿಂದ ಪಡೆದುಕೊಂಡಿರುವ ಹಣವನ್ನು ಹಿಂದಿರುಗಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ 15/4/2023ರ ಇಂದು ಹಣ ಪಾವತಿ ಮಾಡಬೇಕಾಗಿತ್ತು.ವಿಚಾರಣೆ ವೇಳೆ ದತ್ತ ಅವರ ಪರ ವಕೀಲರು, ನಮ್ಮ ಕಕ್ಷಿದಾರರಿಗೆ ಖುದ್ದು ಹಾಜರಿಗೆ ವಿನಾಯಿತಿ ನೀಡುವಂತೆ ಕೋರಿದ್ದರು. ಮನವಿಯನ್ನು ತಿರಸ್ಕರಿಸಿದ ನ್ಯಾಯಾಧೀಶರು ಜಾಮೀನು ರಹಿತ ವಾರಂಟ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿದರು.

ಪ್ರಕರಣ ಸಂಬಂಧ ಈಗಾಗಲೇ ನ್ಯಾಯಾಲಯ ಹಲವು ಬಾರಿ ವಾರಂಟ್ ನೀಡಿದ್ದರೂ ದತ್ತ ಹಾಜರಾಗಿರಲಿಲ್ಲ. 2022ರಲ್ಲಿ ದೂರುದಾರ ಸೋಮಶೇಖರ್ ಸೇರಿದಂತೆ ಇತರರು ದತ್ತಾ ಅವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದು, ಇಂದು ಸಮನ್ಸ್ ಜಾರಿ ಮಾಡಿದೆ.