ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 4ನೇ ಪಟ್ಟಿ ಬಿಡುಗಡೆ ಮಾಡಿದ್ದು, ಇನ್ನು ಕೆಲವೇ ಹೊತ್ತಿನಲ್ಲಿ ಕೊನೆಯ ಪಟ್ಟಿ ಬಿಡುಗಡೆ ಆಗಲಿದೆ. ರಾಜ್ಯದಲ್ಲಿ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಬಾಕಿ ಇದ್ದು, ಬಹುತೇಕ ಅಂತಿಮಗೊಂಡಿದ್ದು ಘೋಷಣೆಗೊಳ್ಳಲು ಮಾತ್ರ ಬಾಕಿ ಇದೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದೆ. ಇನ್ನೂ ಕೆಲವೇ ಹೊತ್ತಿನಲ್ಲಿ ಪಟ್ಟಿ ಬಿಡುಗಡೆಯಾಗಲಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಗೊಳಿಸಿ ನಾಮಪತ್ರ ಸಲ್ಲಿಸಿ ಅಧಿಕೃತವಾಗಿ ಚುನಾವಣಾ ತಾಲೀಮಿಗೆ ಇಳಿದಿದ್ದಾರೆ. ಆದರೆ ಮಂಗಳೂರು ಉತ್ತರದಲ್ಲಿ ಇನ್ನೂ ಕೂಡ ಅಭ್ಯರ್ಥಿ ಯಾರೆಂಬುದರ ಬಗ್ಗೆ ಅಧಿಕೃತಗೊಳ್ಳದೆ ಕಾರ್ಯಕರ್ತರಲ್ಲಿ ಗೊಂದಲ ಮೂಡಿತ್ತು. ಮಾಜಿ ಶಾಸಕರಾದ ಮೊಹಿದ್ದೀನ್ ಬಾವಾ ಟಿಕೆಟ್ ಆಕಾಂಕ್ಷಿ ರೇಸಿನಲ್ಲಿ ಮುಂಚೂಣಿಯಲ್ಲಿದ್ದುಕೊಂಡು ಭಗೀರಥ ಪ್ರಯತ್ನ ಮಾಡಿದ್ದರು. ಆದರೆ ಅವರ ಪ್ರಯತ್ನ ವಿಫಲವಾಗಿದ್ದು ಮಂಗಳೂರು ಉತ್ತರಕ್ಕೆ ಕಾಂಗ್ರೆಸ್ ಹೊಸ ಮುಖಕ್ಕೆ ಮಣೆ ಹಾಕಿದೆ. ಉದ್ಯಮಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆಗಿರುವ ಇನಾಯತ್ ಅಲಿ ಯವರಿಗೆ ಟಿಕೆಟ್ ಫೈನಲ್ ಆಗಿದ್ದು, ಕೆಲವೇ ಹೊತ್ತಿನಲ್ಲಿ ಅಧಿಕೃತವಾಗಿ ಘೋಷಣೆಯಾಗಲಿದೆ.