ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ,ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು 15 ಸಾವಿರ ರೂಗೆ ಹಾಗೂ ಮಿನಿ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರ ಗೌರವಧನವನ್ನು 10 ಸಾವಿರ ರೂಗೆ ಹೆಚ್ಚಿಸಲಾಗುವುದು ಎಂದರು.
ಅಂಗನವಾಡಿ ಕಾರ್ಯಕರ್ತೆಯರಿಗೆ ಪಿಂಚಣಿ ಸೌಕರ್ಯವಿಲ್ಲ. ಹಾಗಾಗಿ ಅವರು ಸೇವಾ ನಿವೃತ್ತಿ ಹೊಂದಿದರೆ ಅಥವಾ ನಿಧನರಾದರೆ,3 ಲಕ್ಷ ರೂ ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 2 ಲಕ್ಷ ರೂ ನೀಡಲಾಗುವುದು. ಕೋವಿಡ್ ಸಂಕಷ್ಟ ಸಮಯದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 8 ಸಾವಿರ ರೂ, ಬಿಸಿಯೂಟ ನೌಕರರಿಗೆ 5 ಸಾವಿರ ರೂ ಗೌರವಧನ ನೀಡಲಾಗುವುದು’ ಎಂದು ಪ್ರಿಯಾಂಕಾ ಭರವಸೆ ನೀಡಿದರು.
ಈಗಾಗಲೇ ತಿಂಗಳಿಗೆ 200 ಯುನಿಟ್ ಕರೆಂಟ್ ಉಚಿತ,ಮಾಸಿಕ 2,000 ರೂ ಪ್ರತಿ ಮನೆಗೆ,10 ಕೆಜಿ ಅಕ್ಕಿ,ಪದವಿ ಪೂರೈಸಿದವರಿಗೆ ತಿಂಗಳಿಗೆ 3,000 ರೂ,ಮಹಿಳೆಯರಿಗೆ ಉಚಿತ ಬಸ್ ಪಾಸ್,ಇದರೊಂದಿಗೆ 6ನೇ ಗ್ಯಾರಂಟಿಯನ್ನು ಪ್ರಿಯಾಂಕಾ ಗಾಂಧಿಯವರು ಘೋಷಣೆ ಮಾಡಿದ್ದಾರೆ.ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಗೆ ಬಂಪರ್ ಭರವಸೆ ನೀಡಿದ್ದಾರೆ ಕಾದು ನೋಡೋಣ.!