ಚಲಿಸುತ್ತಿದ್ದ ಕಾರಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ರಾಷ್ಟ್ರೀಯ

ಪಶ್ಚಿಮ ತ್ರಿಪುರಾ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಬೆಳಕಿಗೆ ಬಂದ ಕೂಡಲೇ ಪ್ರಮುಖ ಆರೋಪಿ ಗೌತಮ್ ಶರ್ಮಾ ಮತ್ತು ಅಪರಾಧ ಮಾಡಿದ ವಾಹನದ ಚಾಲಕ ಮತ್ತು ಸಹ ಆರೋಪಿ ಸುದೀಪ್ ಚೆಟ್ರಿ ಅವರನ್ನು ಬಂಧಿಸಲಾಗಿದೆ.ನಂತರ ಮೂರನೇ ಆರೋಪಿ ಪ್ರಸೇನಜಿತ್ ಪಾಲ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯೊಬ್ಬನ ಮನೆಯಿಂದ 90 ಲಕ್ಷ ರೂ. ಹಣವನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮೂರನೇ ಆರೋಪಿಯಿಂದ ಲ್ಯಾಪ್‌ಟಾಪ್ ಮತ್ತು ಎಟಿಎಂ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೂಜಾಟ ಮತ್ತು ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಪ್ರಸೇನ್‌ಜಿತ್ ಪಾಲ್‌ ಕೈವಾಡ ವಿರುವುದನ್ನು ಪ್ರಾಥಮಿಕ ಸಾಕ್ಷ್ಯಗಳಿಂದ ತಿಳಿದುಬಂದಿದೆ ಎಂದು ಪಶ್ಚಿಮ ತ್ರಿಪುರಾ ಎಸ್‌ಪಿ ಕಿರಣ್ ಕುಮಾರ್ ತಿಳಿಸಿದ್ದಾರೆ. ಈ ಮಧ್ಯೆ ಜಿಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ