ರಾಜ್ಯದಲ್ಲಿ ಬಿಜೆಪಿಯ ಹಿನಾಯ ಸೋಲು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್‌ ರಾಜೀನಾಮೆ ಸಾಧ್ಯತೆ

ರಾಜ್ಯ

ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಹೀನಾಯ ಸೋಲು ಕಂಡ ಕಾರಣ, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್ ಕುಮಾರ್ ಕಟೀಲ್‌ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ.

ಇವತ್ತು ಸಂಜೆ ಅಥವಾ ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾರವರ ನ್ನು ಭೇಟಿಯಾಗಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್ ಕುಮಾರ್ ಕಟೀಲ್‌ ತಮ್ಮ ರಾಜೀನಾಮೆಯನ್ನು ನೀಡುವ ಸಂಭವ ಇದೆ ಎನ್ನಲಾಗುತ್ತಿದೆ.. ರಾಜ್ಯದಲ್ಲಿ ಸಮರ್ಥವಾಗಿ ಕೆಲಸ ಮಾಡಿಲ್ಲ,ಚುನಾವಣೆ ವೇಳೆಯಲ್ಲಿ ಬಿಜೆಪಿಯನ್ನು ಸಂಘಟಿಸುವಲ್ಲಿ ಎಡವಿದ್ದರೆ ಎನ್ನಲಾಗುತ್ತಿದೆ. ಯಾವುದೇ ರಾಜಕೀಯ ಪಕ್ಷಗಳು ಸೋತ ಸಮಯದಲ್ಲಿ ನೈತಿಕ ಹೊಣೆ ಹೊತ್ತು ಆ ಪಾರ್ಟಿಗಳ ಮುಖ್ಯಸ್ಥರು ರಾಜೀನಾಮೆ ನೀಡುವುದು ಹಿಂದಿನಿಂದಲೂ ಕೂಡ ನಡೆದುಕೊಂಡು ಬಂದ ವಾಡಿಕೆ.ಈ ಹಿನ್ನಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವರು ರಾಜೀನಾಮೆ ನೀಡಲಿದ್ದಾರೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.