AICC ಕೇಂದ್ರ ಕಚೇರಿಯಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಮಹತ್ವದ ಸುದ್ದಿಗೋಷ್ಠಿಯನ್ನು ನಡೆಸಲಾಗುತ್ತಿದೆ. ಈ ಸುದ್ದಿಗೋಷ್ಠಿಯಲ್ಲೇ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯ ಹೆಸರು ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ.ಈಗಾಗಲೇ ಕರ್ನಾಟಕದ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ 2ನೇ ಬಾರಿಗೆ, ಉಪ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂಬುದಾಗಿ ಕಾಂಗ್ರೆಸ್ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಇಂದು ಸಂಜೆ 7 ಗಂಟೆ ಸಮಯಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಬೆಂಗಳೂರಿನಲ್ಲಿ ಕರೆಯಲಾಗಿದೆ. CLP ಸಭೆಗೂ ಮುನ್ನವೇ ಇಂದು ಬೆಳಿಗ್ಗೆ 10ಕ್ಕೆ ಎಐಸಿಸಿಯಿಂದ ಮಹತ್ವದ ಸುದ್ದಿಗೋಷ್ಠಿಯನ್ನು ಕರೆಯಲಾಗಿದ್ದು, ಈ ಸುದ್ದಿಗೋಷ್ಠಿಯಲ್ಲಿ ಕರ್ನಾಟಕದ ಸಿಎಂ ಯಾರು ಎಂಬ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ. ಬಳಿಕ CLP ಸಭೆಯಲ್ಲಿ ನಾಯಕನ ಆಯ್ಕೆ ನಡೆಯಲಿದೆ ಎದು ಹೇಳಲಾಗುತ್ತಿದೆ.