ಎರಡು ಸಾವಿರ ಮುಖಬೆಲೆಯ ನೋಟು ಬ್ಯಾನ್,ಆರ್ ಬಿ ಐ ಆದೇಶ.ಬದಲಾವಣೆ ಸೆ.30 ವರೆಗೆ ಅವಕಾಶ

ರಾಷ್ಟ್ರೀಯ

ಎರಡು ಸಾವಿರ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂದಕ್ಕೆ ಪಡೆಯುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್‌ ಶುಕ್ರವಾರ ಘೋಷಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ₹ 2 ಸಾವಿರದ ನೋಟು ವಿತರಣೆ ನಿಲ್ಲಿಸಲು ಬ್ಯಾಂಕ್‌ಗಳಿಗೆ ಸೂಚನೆ ನೀಡಿದೆ

ಸದ್ಯ ಚಲಾವಣೆಯಲ್ಲಿ ಇರುವ ನೋಟುಗಳನ್ನು ಸೆಪ್ಟೆಂಬರ್‌ 30ರ ಒಳಗಾಗಿ ಬ್ಯಾಂಕ್‌ಗಳಲ್ಲಿ ಠೇವಣಿ ಇಡುವಂತೆ ಅಥವಾ ಬೇರೆ ಮುಖಬೆಲೆಯ ನೋಟುಗಳೊಂದಿಗೆ ವಿನಿಮಯ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ. ಮೇ 23ರಿಂದ ನೋಟುಗಳನ್ನು ಬದಲಿಸಿಕೊಳ್ಳಬಹುದಾಗಿದೆ.