ಈ‌ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಿತ್ತು.ಇನ್ನು ನಿಮ್ಮ ಕೇಸರಿಕರಣ ನಡೆಯಲ್ಲ. ಪೊಲೀಸ್ ಅಧಿಕಾರಿಗಳಿಗೆ ಖಡಕ್ಕ್ ವಾರ್ನಿಂಗ್; ಡಿ.ಕೆ.ಶಿವಕುಮಾರ್

ರಾಜ್ಯ

ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ.? ನಮ್ಮ ಸರ್ಕಾರದಲ್ಲಿ ಇಂತಾಹ ಕೆಲಸಕ್ಕೆ ಅವಕಾಶ ಕೊಡುವುದಿಲ್ಲ ಎಂದು ಡಿಕೆ ಶಿವಕುಮಾರ್ ರವರು ಉನ್ನತ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ವಿದ್ಯಮಾನ ಮಂಗಳವಾರ ನಡೆದಿದೆ. ಉನ್ನತ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ, ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಪೊಲೀಸರೇ ಕೇಸರಿ ಶಾಲು ಹಾಕುತ್ತೀರಿ ಅಂದರೆ ಹೇಗೆ.?ಈ‌ ಸಭೆಗೂ ಕೇಸರಿ ಶಾಲು ಹಾಕಿಕೊಂಡ ಬರಬೇಕಾಗಿತ್ತು. ನಮ್ಮ ಸರ್ಕಾರದಲ್ಲಿ ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ನಾವು ಖಂಡಿತಾ ಬಿಡುವುದಿಲ್ಲ ಎಂದಿದ್ದಾರೆ.

ಪಿಎಸ್​ಐ ಅಕ್ರಮದಲ್ಲಿ ಒಬ್ಬ ಎಡಿಜಿಪಿ ಪೇಪರ್ ತಿದ್ದುತ್ತಾರೆ ಅಂದರೆ ಇಲಾಖೆ ಎಷ್ಟು ಕೆಟ್ಟು ಹೋಗಿದೆ ಎಂಬುದು ತಿಳಿಯುತ್ತದೆ. ಪೊಲೀಸ್ ಇಲಾಖೆಯ ಘನತೆಯನ್ನು ನೀವು ಹಾಳು‌ ಮಾಡಿ ಹಾಕಿದ್ದೀರಿ. ಇದನ್ನು ನಮ್ಮ ಸರಕಾರ ಸಹಿಸುವುದಿಲ್ಲ. ನಮ್ಮ ಸರ್ಕಾರದಲ್ಲಿ ಎಲ್ಲವೂ ಸ್ವಚ್ಛವಾಗಿರಬೇಕು. ಜನ ದೊಡ್ಡ ಬದಲಾವಣೆ ನಿರೀಕ್ಷೆ ಮಾಡಿದ್ದಾರೆ.ಭೃಷ್ಟಚಾರಕ್ಕೆ ಅವಕಾಶವಿಲ್ಲ.ಅದರಂತೆ ಪೊಲೀಸ್ ಇಲಾಖೆಯಲ್ಲಿ ಬದಲಾವಣೆ ಆಗಬೇಕು. ನೀವು ಯಾರೂ ನಮಗೆ ಕಪ್ಪ ಕೊಡುವುದು ಬೇಡ. ಉತ್ತಮವಾಗಿ ಕೆಲಸ ಮಾಡಿದರೆ ಸಾಕು ಎಂದು ಹಿರಿಯ ಪೊಲೀಸರಿಗೆ ಡಿಕೆಶಿ ವಕುಮಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಕಳೆದ 4-5 ವರ್ಷಗಳಿಂದ ನೀವು ಸರ್ಕಾರದಲ್ಲಿ ಏನು ಮಾಡಿದ್ದೀರಿ ಎಂಬುದು ಗೊತ್ತಿದೆ. ನಿಮ್ಮ ಆ ವರ್ತನೆ ನಮ್ಮ ಸರ್ಕಾರದಲ್ಲಿ ನಡೆಯಲಾರದು.ಕಳೆದು ಹೋದ ಸಮಯದಲ್ಲಿ ನಮ್ಮ ಜೊತೆಗೆ ಹೇಗೆ ನಡೆದುಕೊಂಡಿದ್ದೀರಿ ಎಂದೂ ಗೊತ್ತಿದೆ. ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ನಾವು ನಿಮ್ಮ ಜೊತೆ ಇರುತ್ತೇವೆ. ಈ ಸರ್ಕಾರದ ಮೇಲೆ ಜನ ನಂಬಿಕೆ ಇಟ್ಟಿದ್ದಾರೆ, ಅದನ್ನು ಉಳಿಸಿಕೊಳ್ಳಿ ಎಂದು ಹಿರಿಯ ಅಧಿಕಾರಿಗಳಿಗೆ ಡಿಕೆಶಿ ಸೂಚನೆ ಖಡಕ್ಕಾಗಿ ಸೂಚನೆ ನೀಡಿದ್ದಾರೆ