ಮೇ.29 ರಿಂದ ರಾಜ್ಯಾಧ್ಯಂತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಪ್ರಾರಂಭ, ಮಕ್ಕಳಿಗೆ ಸಿಹಿ ಹಂಚಿ, ಸ್ವಾಗತಕ್ಕೆ ಸಿದ್ದತೆ

ರಾಜ್ಯ

ಮೇ.29 ರಿಂದ ರಾಜ್ಯಾಧ್ಯಂತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗಲಿವೆ. ಮೇ.29ರ ಸೋಮವಾರದ ನಾಳೆಯಿಂದ ಸರ್ಕಾರಿ, ಅನುದಾನಿತ ಶಾಲೆಗಳು ತೆರೆಯಲಿದೆ.2023-24ನೇ ಸಾಲಿನಲ್ಲಿ ಶಾಲೆಗಳನ್ನು ಆರಂಭಿಸಲು ಶಾಲಾ ಶಿಕ್ಷಣ ಇಲಾಖೆಯು ಮೇ.29ರ ದಿನಾಂಕವನ್ನು ನಿಗದಿ ಪಡಿಸಿತ್ತು. ಅದರಂತೆ ಶಾಲೆಗಳ ಆರಂಭಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಶಾಲೆಗಳನ್ನು ಸಿಂಗಾರಗೊಳಿಸಲಾಗಿದ್ದು, ಮಕ್ಕಳಿಗೆ ಸಿಹಿ ಹಂಚಿ ಪ್ರೀತಿಯಿಂದ ಬರ ಮಾಡಿಕೊಳ್ಳಲು ಶಿಕ್ಷಕರು ಸಿದ್ಧರಾಗಿದ್ದಾರೆ.

ಇದೇ ಮೊದಲ ಬಾರಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಒಂದು ಜತೆ ಸಮವಸ್ತ್ರ ಮತ್ತು ಶಾಲೆ ಆರಂಭಕ್ಕೂ ಮುನ್ನವೇ ಶೇ.98ರಷ್ಟು ಪಠ್ಯಪುಸ್ತಕಗಳನ್ನು ವಿತರಿಸಿ ದಾಖಲೆ ನಿರ್ಮಿಸಿದೆ.ಕಳೆದ ವರ್ಷ ವಿದ್ಯಾರ್ಥಿಗಳಿಗೆ ಸಮವಸ್ತ್ರ ಸೇರಿದಂತೆ ಪಠ್ಯಪುಸ್ತಕ ಕೂಡ ಸರಿಯಾದ ಸಮಯಕ್ಕೆ ಹಂಚಿಕೆ ಮಾಡಲಾಗಿರಲಿಲ್ಲ. ಆಗಸ್ಟ್ ತಿಂಗಳಾಂತ್ಯದವರೆಗೂ ಕಾಯಬೇಕಾಗಿತ್ತು. ಆದ್ರೇ ಈ ಬಾರಿ ಮಾತ್ರ ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಶಾಲೆಗಳ ಆರಂಭಕ್ಕೆ ಮುನ್ನವೇ ಸಮವಸ್ತ್ರ, ಪಠ್ಯಪುಸ್ತಕ ಗಳನ್ನು ವಿತರಿಸಿದೆ.

ನಾಳೆಯ ಶಾಲೆ ಆರಂಭಕ್ಕಾಗಿ ಶಾಲೆಗಳನ್ನು ಸಿಂಗಾರಗೊಳಿಸುವಂತೆ, ಸಿಹಿ ಮತ್ತು ಬಿಸಿಯೂಟ ವಿತರಿಸಿ ಬರಮಾಡಿಕೊಳ್ಳುವಂತೆ ಡಿಡಿಪಿಐ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆಯನ್ನು ಶಿಕ್ಷಣ ಇಲಾಖೆ ಆಯುಕ್ತರು ನೀಡಿದ್ದಾರೆ.