ಒಂಬತ್ತು ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಹತ್ಯೆ. ಆರೋಪಿಗೆ ಗಲ್ಲು ಶಿಕ್ಷೆ.15 ದಿನದಲ್ಲೇ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

ರಾಷ್ಟ್ರೀಯ

ಒಂಬತ್ತು ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ ಮಾಡಿದ ವ್ಯಕ್ತಿಗೆ ಮಥುರಾದ ಪೋಕ್ಸೊ ನ್ಯಾಯಾಲಯ ಸೋಮವಾರ ಗಲ್ಲು ಶಿಕ್ಷೆ ವಿಧಿಸಿದೆ.

ಪೋಕ್ಸೊ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ರಾಮ್ ಕಿಶೋರ್ ಯಾದವ್ ಅವರು, ಎರಡೂ ಕಡೆಯ ವಾದ ಆಲಿಸಿದ ನಂತರ ಆರೋಪಿ ಮೊಹಮ್ಮದ್ ಸೈಫ್‌ಗೆ ಮರಣದಂಡನೆ ಶಿಕ್ಷೆ ವಿಧಿಸಿದ್ದಾರೆ ಎಂದು ವಿಶೇಷ ಜಿಲ್ಲಾ ಸರ್ಕಾರಿ ವಕೀಲರು ಹೇಳಿದ್ದಾರೆ.

ನ್ಯಾಯಾಧೀಶರು ಕೇವಲ 15 ದಿನಗಳ ವಿಚಾರಣೆ ಬಳಿಕ ತೀರ್ಪು ಪ್ರಕಟಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.