ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ‘ಗೃಹ ಜ್ಯೋತಿ’ ಯೋಜನೆಯ ಮಾರ್ಗಸೂಚಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗಿದೆ. ಈ ಯೋಜನೆಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹೊಸ ನಿಬಂಧನೆ ಹಾಕಿದ್ದು, ಯೋಜನೆಯ ಲಾಭ ಪಡೆಯಲು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.ಅಲ್ಲದೇ ಗೃಹ ವಿದ್ಯುತ್ ಬಳಕೆದಾರರಲ್ಲಿ ಒಂದಕ್ಕಿಂತ ಹೆಚ್ಚಿನ ಮೀಟರ್ ಇದ್ದಲ್ಲಿ ಒಂದು ಮೀಟರ್ ಗೆ ಮಾತ್ರ ಈ ಯೋಜನೆ ಅನ್ವಯವಾಗಲಿದೆ. ಈ ಮೂಲಕ ಬಾಡಿಗೆ ಮನೆಯವರಿಗೆ ಶಾಕ್ ನೀಡಲಾಗಿದೆ. ಇದರಿಂದಾಗಿ 200 ಯೂನಿಟ್ ವಿದ್ಯುತ್ ಬಳಸಬಹುದು ಎಂದುಕೊಂಡಿದ್ದ ಬಾಡಿಗೆದಾರರು ಯೋಜನೆಯಿಂದ ವಂಚಿತರಾಗುವ ಸಾಧ್ಯತೆಯಿದೆ.
ಸರ್ಕಾರ ನೀಡಿರುವ ಆದೇಶದ ಪ್ರಕಾರ ಕಳೆದ 12 ತಿಂಗಳಿನಲ್ಲಿ ಬಳಸಿದ ಯೂನಿಟ್‌ಗಳ ಆಧಾರದ ಮೇಲೆ ಶೇಕಡಾ 10 ರಷ್ಟು ಹೆಚ್ಚುವರಿ ಬಳಕೆ ಮಾಡಲು ಅನುಮತಿ ನೀಡಿದೆ. ಇದು ಸಂಪೂರ್ಣ ಉಚಿತವಾಗಿರಲಿದೆ. ಒಂದು ವೇಳೆ 200 ಯೂನಿಟ್‌ಗಿಂತ ಹೆಚ್ಚಿನ ವಿದ್ಯುತ್ ಬಳಕೆ ಮಾಡಿದರೆ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಬೇಕಾಗುತ್ತದೆ.ಈ ಯೋಜನೆಯು ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯವಾಗಲಿದ್ದು. ವಾಣಿಜ್ಯ ಉದ್ದೇಶಕ್ಕೆ ಬಳಸುವವರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ