ಭೂ ಖರೀದಿದಾರರಿಗೆ ಸರ್ಕಾರ ಶಾಕ್ ನೀಡಲು ಮುಂದಾಗಿದೆ.ಶೀಘ್ರದಲ್ಲೇ ಆಸ್ತಿ ಮಾರ್ಗಸೂಚಿ ದರ ಪರಿಷ್ಕರಿಸುವುದಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
ಆಸ್ತಿ ಮಾರ್ಗಸೂಚಿ ದರ ಪರಿಷ್ಕರಣೆ ಮಾಡುವ ಚಿಂತನೆ ಇದೆ. ಕಳೆದ ನಾಲ್ಕೂವರೆ ವರ್ಷಗಳಿಂದ ಮಾರ್ಗಸೂಚಿ ದರ ಏರಿಕೆಯಾಗಿಲ್ಲ. ಸಾಮಾನ್ಯವಾಗಿ ಎರಡು ವರ್ಷಗಳಿಗೊಮ್ಮೆ ಮಾರ್ಗಸೂಚಿ ದರ ಏರಿಕೆ ಮಾಡಲಾಗುವುದು. ಆದರೆ, ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಲ್ಕು ವರ್ಷದಿಂದ ಮಾರ್ಗಸೂಚಿ ದರ ಏರಿಕೆ ಮಾಡಿಲ್ಲ. ಮಾರುಕಟ್ಟೆ ದರಕ್ಕೆ ತಕ್ಕಂತೆ ಮಾರ್ಗಸೂಚಿ ದರ ಇರಬೇಕೆಂದು ಅಧಿಕಾರಿಗಳು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಮಾರ್ಗಸೂಚಿ ದರ ಹೆಚ್ಚಿಸಲಾಗುವುದು ಎಂದರು.
ಮಾರುಕಟ್ಟೆ ಬೆಲೆಗೂ ಗೈಡೆನ್ಸ್ ವ್ಯಾಲ್ಯೂಗೂ ಸಾಕಷ್ಟು ವ್ಯತ್ಯಾಸ ಇದೆ. ಇದರಿಂದ ರೈತರಿಗೂ ತೊಂದರೆ ಆಗುತ್ತದೆ. ಹಾಗಾಗಿ ಗೈಡೆನ್ಸ್ ವ್ಯಾಲ್ಯೂ ರಿವಿಷನ್ ಬಗ್ಗೆ ಸದ್ಯದಲ್ಲೇ ತೀರ್ಮಾನ ಮಾಡಲಿದ್ದೇವೆ. ಎಷ್ಟು ದರ ಏರಿಕೆ ಮಾಡಬೇಕೆಂದು ಈ ವಾರದಲ್ಲಿ ಸಭೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.