ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಹಿನ್ನೆಲೆಯಲ್ಲಿ ಇಂದು ಐದು ತಾಲೂಕುಗಳಲ್ಲಿನ ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಮಂಗಳೂರು, ಮೂಲ್ಕಿ, ಉಳ್ಳಾಲ, ಮೂಡಬಿದರೆ ಮತ್ತು ಬಂಟ್ವಾಳ ತಾಲೂಕುಗಳ ಶಾಲಾ- ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.
ಕರಾವಳಿಯಲ್ಲಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು,ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ತಹಶೀಲ್ದಾರ್ ರವರಿಗೆ,ಅವರವರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರ ನೀಡಿ ಡಿಸಿ ಆದೇಶಿಸಿದ್ದಾರೆ.