ಬೆಂಕಿ ಚೆಂಡು ಶೋಭಾ ಕರಂದ್ಲಾಜೆ ಬಿಜೆಪಿ ರಾಜ್ಯಾಧ್ಯಕ್ಷ; ಬೊಮ್ಮಾಯಿ ವಿಪಕ್ಷ ನಾಯಕ: ಅಧಿಕೃತ ಘೋಷಣೆಯೊಂದೆ ಬಾಕಿ

ರಾಜ್ಯ

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ನಿರೀಕ್ಷಿಸಿದಕ್ಕಿಂತ ಹೆಚ್ಚು ಸ್ಥಾನ ಪಡೆದು ಭರ್ಜರಿ ಜಯಗಳಿಸಿ ಅಧಿಕಾರದ ಗದ್ದುಗೆ ಪಡೆದಿದೆ. ಬಿಜೆಪಿಯ ಕೋಮುವಾದಿ ನಿಲುವಿಗೆ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್ ಗ್ಯಾರಂಟಿ ಯೋಜನೆ ಮೂಲಕ ಜನರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಯಿತು.

135 ಸ್ಥಾನ ಪಡೆದ ಕಾಂಗ್ರೆಸ್ ಮುಖ್ಯಮಂತ್ರಿ ಆಯ್ಕೆಯನ್ನು ಯಾವುದೇ ಗೊಂದಲಕ್ಕೆ ಎಡೆ ಮಾಡದೆ ಆಯ್ಕೆ ಮಾಡಿ ಸೈ ಎನಿಸಿದರೆ, ಬಿಜೆಪಿ ವಿಪಕ್ಷ ನಾಯಕ ಘೋಷಣೆಗೆ ಮೀನಮೇಷ ಎಣಿಸುತ್ತಿದ್ದು ಸಾರ್ವಜನಿಕವಾಗಿ ಟ್ರೋಲ್ ಗೆ ಒಳಗಾಗಿದೆ. ಈವರೆಗೂ ಅಧಿಕೃತವಾಗಿ ಘೋಷಣೆ ಮಾಡದೆ ಪಕ್ಷ ಗೊಂದಲಕ್ಕೆ ಸಿಲುಕಿದೆ.

ಇದೀಗ ದೊರೆತ ಮಾಹಿತಿಯಂತೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೊಕ್ ನೀಡುವುದು ಪಕ್ಕಾ ಆಗಿದ್ದು, ಅವರ ಸ್ಥಾನಕ್ಕೆ ಬೆಂಕಿ ಚೆಂಡು, ಸಂಸದೆ ಶೋಭಾ ಕರಂದ್ಲಾಜೆ ಹೆಸರು ಫೈನಲ್ ಆಗಿದೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ.

ಇನ್ನು ವಿಧಾನಸಭೆಯ ವಿಪಕ್ಷ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಸರು ಅಂತಿಮಗೊಂಡಿರುವುದಾಗಿ ತಿಳಿದುಬಂದಿದೆ.

ಎರಡು ಸ್ಥಾನಕ್ಕೂ ಅಧಿಕೃತ ಘೋಷಣೆಯೊಂದೆ ಬಾಕಿ ಉಳಿದಿದ್ದು, ಇಂದು ರಾತ್ರಿ ಅಥವಾ ನಾಳೆ ಘೋಷಣೆ ಮಾಡುವ ಸಾಧ್ಯತೆ ಇದೆ.