ಜನನ, ಮರಣ ಪ್ರಮಾಣ ಪತ್ರ ಗ್ರಾಮ ಪಂಚಾಯತಿನಲ್ಲೇ ಪಡೆಯಲು ಆದೇಶ

ರಾಜ್ಯ

ಗ್ರಾಮ ಪಂಚಾಯಿತಿ ಕಚೇರಿಗಳಲ್ಲೇ ಜನನ ಮತ್ತು ಮರಣ ನೊಂದಣಿ ಪ್ರಮಾಣ ಪತ್ರಗಳನ್ನು ಪಡೆಯಲು ಅನುಕೂಲ ಕಲ್ಪಿಸಿ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸುತ್ತೋಲೆ ಹೊರಡಿಸಿದೆ.

ಗ್ರಾಮ ಪಂಚಾಯಿತಿ ಕಚೇರಿಗಳಲ್ಲೇ ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಪಡೆಯಬಹುದು ಎಂದು ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿ ಒಂದೂವರೆ ವರ್ಷ ಕಳೆದಿದೆ. ಆದರೆ ಇನ್ನೂ ಗ್ರಾ.ಪಂ ಗಳಲ್ಲಿ ಈ ಪ್ರಮಾಣ ಪತ್ರಗಳ ವಿತರಣೆ ಆರಂಭವಾಗಿಲ್ಲ.

ಗ್ರಾಮೀಣ ಪ್ರದೇಶದಲ್ಲಿ ನಾಗರಿಕ ನೋಂದಣಿ ಪದ್ಧತಿ ಬಲಪಡಿಸಲು ಹಾಗೂ ಘಟಿಸುವ ಶೇ.100 ರಷ್ಟು ಜನನ, ಮರಣ ನೊಂದಣಿ ಘಟನೆಗಳನ್ನು ದಾಖಲಿಸಲು ಜನನ, ಮರಣ ನೊಂದಣಿ ಅಧಿನಿಯಮ 1969 ರ ಪ್ರಕರಣ 7 (5) ರನ್ವಯ ಜನನ, ಮರಣ ಘಟನೆಗಳು ಘಟಿಸಿದ ಮೂವತ್ತು ದಿನಗಳವರೆಗೆ ನೋಂದಾಯಿಸಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಉಪ ನೋಂದಣಿಕಾರಿಗಳನ್ನಾಗಿ ನೇಮಿಸಲಾಗಿದೆ. ಹಾಗೆಯೇ, ಪ್ರಕರಣ 7 (1) ರನ್ವಯ ಜನನ, ಮರಣ ಘಟನೆಗಳು ಸಂಭವಿಸಿದ 30 ದಿನಗಳ ನಂತರದ ವಿಳಂಬ ನೋಂದಣಿಯಡಿ ನೋಂದಾಯಿಸಲು ಗ್ರಾಮ ಲೆಕ್ಕಾಧಿಕಾರಿಕಾರಿಗಳನ್ನು ನೋಂದಣಾಧಿಕಾರಿ ಗಳನ್ನಾಗಿ ನೇಮಿಸಲಾಗಿದೆ.

ಸಂಬಂಧಿಸಿದ ಸಕ್ಷಮ ಪ್ರಾಧಿಕಾರದ ಅನುಮೋದನೆ/ಆದೇಶ ಪಡೆದು ನಿಗದಿಪಡಿಸಿದ ವಿಳಂಬ ಶುಲ್ಕದೊಂದಿಗೆ ನೋಂದಾಯಿಸಲು ಆದೇಶಿಸಲಾಗಿದೆ.