ನಂದಿನಿ ಒಡಲಲ್ಲಿ ಅಕ್ರಮ ಮರಳುಗಾರಿಕೆ; ಪೊಲೀಸರ ದಾಳಿ ವೇಳೆ ಆರೋಪಿಗಳು ಪರಾರಿ,ಸೊತ್ತು ವಶ

ಕರಾವಳಿ

ಬಜಪೆ ಠಾಣಾ ವ್ಯಾಪ್ತಿಯ ಕುತುಕೊಳಿ ಎಂಬಲ್ಲಿ ನಂದಿನಿ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಪ್ರದೇಶಕ್ಕೆ ಬಜಪೆ ಪೊಲೀಸ್ ನಿರೀಕ್ಷಕರಾದ ಪ್ರಕಾಶ್ ರವರ ನೇತೃತ್ವದ ತಂಡ ದಾಳಿ ನಡೆಸಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವೇಳೆ ಆರೋಪಿಗಳು ಪರಾರಿಯಾಗಿದ್ದು,ಮರಳುಗಾರಿಕೆಗೆ ಬಳಸುತ್ತಿದ್ದ ಕಬ್ಬಿಣದ ಬೋಟ್ , ಡೀಸೆಲ್ ಪಂಪ್,ಮರಳು ಫಿಲ್ಟರ್ ಮಾಡಲು ಬಳಸುವ ಸಾಧನದೊಂದಿಗೆ ಹಲವಾರು ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡು,ಬೃಹತ್ ಪ್ರಮಾಣದ ಅಕ್ರಮ ಮರಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿರುತ್ತಾರೆ.

ನಂದಿನಿ ನದಿಯ ಒಡಲಿನಿಂದ ಅಕ್ರಮವಾಗಿ ಮರಳು ತೆಗೆಯುತ್ತಿರುವ ಕುರಿತು ಬಜಪೆ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆದಿರುತ್ತದೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪರವಾನಿಗೆ ರಹಿತವಾಗಿ ಮರಳನ್ನು ಕಳವು ಮಾಡುತ್ತಿರುವ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.