ಭಾರತೀಯ ಜನತಾ ಪಾರ್ಟಿ ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದೆ.ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್ ನೀಡಲಾಗಿದೆ.
ತೆಲಂಗಾಣದ ಬಂಡಿ ಸಂಜಯ್ ಸೇರಿದಂತೆ 8 ಜನರನ್ನು ಪ್ರಧಾನ ಕಾರ್ಯದರ್ಶಿಗಳನ್ನಾಗಿ ಮಾಡಲಾಗಿದೆ.13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಬಿ.ಎಲ್. ಸಂತೋಷ್ ಅವರನ್ನು ಮುಂದುವರೆಸಲಾಗಿದೆ.
ಸಂಘಟನಾ ಕಾರ್ಯದರ್ಶಿ, ಸಹ ಸಂಘಟನಾ ಕಾರ್ಯದರ್ಶಿ, ಕೊಶಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.