ಡ್ಯಾನ್ಸ್ ಮಾಸ್ಟರ್ ಸೇರಿ ಮೂವರಿಂದ ಕಾಲೇಜು ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ

ರಾಜ್ಯ

ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಡ್ಯಾನ್ಸ್ ಮಾಸ್ಟರ್ ಸೇರಿದಂತೆ ಮೂವರನ್ನು ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಖಾಸಗಿ ಶಾಲೆಯ ಡ್ಯಾನ್ಸ್ ಮಾಸ್ಟರ್ ಆಂಡಿ ಜಾರ್ಜ್, ಸಂತೋಷ್ ಮತ್ತು ಶಶಿ ಎಂದು ಗುರುತಿಸಲಾಗಿದೆ.ಡ್ಯಾನ್ಸ್ ಮಾಸ್ಟರ್ ಆಂಡಿ ಕಾಲೇಜು ವಿದ್ಯಾರ್ಥಿನಿಯೊಂದಿಗೆ ಸಾಮಾಜಿಕ ಮಾಧ್ಯಮದ ಮೂಲಕ ಸ್ನೇಹ ಬೆಳೆಸಿದ್ದಾನೆ.ನಂತರ ಆಕೆಯ ಖಾಸಗಿ ಕ್ಷಣಗಳನ್ನು ರೆಕಾರ್ಡ್ ಮಾಡಿ ನಂತರ ಬೆದರಿಕೆ ಹಾಕಲು ಪ್ರಾರಂಭಿಸಿದ್ದಾನೆ. ಬಳಿಕ ತನ್ನ ಬಳಿಯಿದ್ದ ಖಾಸಗಿ ಚಿತ್ರಗಳನ್ನು ಹಂಚಿಕೊಳ್ಳುವುದಾಗಿ ಬ್ಲ್ಯಾಕ್ ಮೇಲ್ ಮಾಡಿ ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಅತ್ಯಾಚಾರ ಕೃತ್ಯವನ್ನು ರೆಕಾರ್ಡ್ ಮಾಡಿಕೊಂಡಿದ್ದ ಆತ, ಈ ದೃಶ್ಯಾವಳಿಯನ್ನು ಬಳಸಿಕೊಂಡು ಆಕೆಯನ್ನು ಬ್ಲಾಕ್‌ಮೇಲ್ ಮಾಡುವುದನ್ನು ಮುಂದುವರೆಸಿದ್ದ ಮತ್ತು ಪದೇ ಪದೇ ಅತ್ಯಾಚಾರ ಎಸಗುತ್ತಿದ್ದ.ಆರೋಪಿ ತನ್ನ ಸ್ನೇಹಿತರನ್ನು ಮನೆಗೆ ಕರೆಸಿಕೊಂಡು ತನ್ನ ಮೇಲೆ ಅತ್ಯಾಚಾರ ಎಸಗಿದ್ದ ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾಳೆ.ಆರೋಪಿಯು ಆಕೆಯ ಚಿತ್ರಗಳು ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದ. ಸಂತ್ರಸ್ತೆ  ಧೈರ್ಯ ಮಾಡಿ ಪೊಲೀಸರಿಗೆ ದೂರು ನೀಡಿದ್ದಾಳೆ.