ದೇಶದಲ್ಲಿಯೇ ಅತೀ ಹೆಚ್ಚು ಲಾಕಪ್ ಡೆತ್ ಗಳು ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ ನಲ್ಲಿ ಸಂಭವಿಸಿದೆ

ರಾಷ್ಟ್ರೀಯ

ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯದಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ಕಸ್ಟಡಿ ಸಾವುಗಳು ಸಂಭವಿಸಿವೆ. ಗುಜರಾತ್‌ನಲ್ಲಿ ಕಳೆದ ಐದು ವರ್ಷಗಳಲ್ಲಿ 81 ಲಾಕಪ್ ಡೆತ್ ಗಳು ವರದಿಯಾಗಿದ್ದು,  ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯದಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ಕಸ್ಟಡಿ ಸಾವುಗಳು ಸಂಭವಿಸಿವೆ. ಗುಜರಾತ್ ನಂತರ ಮಹಾರಾಷ್ಟ್ರದಲ್ಲಿ ಲಾಕಪ್ ಡೆತ್ ವರದಿಯಾಗಿದ್ದು, ಪೊಲೀಸರ ವಶದಲ್ಲಿದ್ದಾಗ 80 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಗೆ ತಿಳಿಸಿದೆ.

ಏಪ್ರಿಲ್ ಒಂದು 2018 ರಿಂದ ಮಾರ್ಚ್ 31, 2023 ರವರೆಗೆ ದೇಶದ ವಿವಿಧ ಭಾಗಗಳಲ್ಲಿ 687 ಜನ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಮಾಹಿತಿ ನೀಡಿದ್ದಾರೆ. ಗುಜರಾತ್‌ನಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾಗ 81 ಸಾವುಗಳು ವರದಿಯಾಗಿದ್ದರೆ, ಮಹಾರಾಷ್ಟ್ರದಲ್ಲಿ ಈ ಅವಧಿಯಲ್ಲಿ 80 ಸಾವುಗಳು ಸಂಭವಿಸಿವೆ ಎಂದು ಲಿಖಿತ ಪ್ರಶ್ನೆಗೆ ಉತ್ತರಿಸಿದ್ದಾರೆ.

ಮಧ್ಯಪ್ರದೇಶದಲ್ಲಿ 50, ಬಿಹಾರದಲ್ಲಿ 47, ಉತ್ತರ ಪ್ರದೇಶದಲ್ಲಿ 41 ಮತ್ತು ತಮಿಳುನಾಡಿನಲ್ಲಿ 36 ಪೊಲೀಸ್ ಕಸ್ಟಡಿ ಸಾವುಗಳು ವರದಿಯಾಗಿವೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.