ಬಜಪೆ ಪೊಲೀಸರ ಭರ್ಜರಿ ಕಾರ್ಯಾಚರಣೆ, ಬ್ಯಾಟರಿ ಕಳ್ಳತನ ಮಾಡುತಿದ್ದ ಕುಖ್ಯಾತ ಕಳ್ಳರ ಬಂದನ

ಕರಾವಳಿ

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಡೂರು, ಕೈಕಂಬ ಮತ್ತು ಗುರುಪುರ ಪರಿಸರಗಳಲ್ಲಿ ಪಾರ್ಕ್ ಮಾಡಿ ನಿಲ್ಲಿಸಿದ್ದ ಟಿಪ್ಪರ್ ಲಾರಿ, ಜೆ.ಸಿ.ಬಿ ಮತ್ತು ಇತರ ವಾಹನಗಳಿಂದ ಬ್ಯಾಟರಿಗಳು ಕಳವಾಗಿರುವ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು ಸದ್ರಿ ಪ್ರಕರಣಗಳಲ್ಲಿ ತನಿಖೆ ನಡೆಸಿದ ಬಜಪೆ ಪೊಲೀಸ್ ನಿರೀಕ್ಷಕರಾದ ಪ್ರಕಾಶ ರವರ ತಂಡ ದಿನಾಂಕ 08-08-2023 ಮಂಗಳೂರು ತಾಲೂಕು ಬಜಪೆ ಗ್ರಾಮದ ಒಡ್ಡಿದ ಕಲ ಎಂಬಲ್ಲಿ ಬ್ಯಾಟರಿಗಳನ್ನು ಕಳವು ಮಾಡಿಕೊಂಡು ಕಾರಿನಲ್ಲಿ ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳಿಂದ ಸರಿ-ಸುಮಾರು 4 ಲಕ್ಷ ರೂಪಾಯಿ ಮೌಲ್ಯದ ಒಂದು ಕಾರು ಮತ್ತು 1.50 ಲಕ್ಷ ರೂಪಾಯಿ ಮೌಲ್ಯದ ಒಟ್ಟು 17 Amaron ಕಂಪೆನಿಯ ಬ್ಯಾಟರಿಗಳನ್ನು ಸ್ವಾಧೀನಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.

ಆರೋಪಿಯಗಳಾದ ಪ್ರತಾಪ್ (20) ತಂದೆ:-ಉಮೇಶ್, ವಾಸ:ಮಿತ್ತ ಕೊಳಪಿಲ, ರಾಘವೇಂದ್ರ ಭಜನಾ ಮಂದಿರ ಬಳಿ ಈಶ್ವರ ಕಟ್ಟೆ ಮೂಡುಪೆರಾರ ಗ್ರಾಮ ಹಾಗೂ ಅನೀಲ್ @ ಅನೀ (23) ತಂದೆ:-ಜೇಮ್ಸ್ , ವಾಸ: ಚರ್ಚ ರೋಡ್ ಕಂದಾವರ ಗ್ರಾಮ ಮಂಗಳೂರು ತಾಲೂಕು ಇವರುಗಳು ರಾತ್ರಿ ಸಮಯದಲ್ಲಿ ಪಾರ್ಕ್ ಮಾಡಿ ನಿಲ್ಲಿಸುವ ವಾಹನಗಳ ಬ್ಯಾಟರಿ ಕಳ್ಳತನ ಮಾಡುತಿದ್ದು,ಬ್ಯಾಟರಿ ಕಳ್ಳತನದ ಬಗ್ಗೆ ಹಲವಾರು ದೂರುಗಳು ಬಂದ ಹಿನ್ನಲೆಯಲ್ಲಿ ಆರೋಪಿಗಳ ಬಂದನಕ್ಕೆ ವಿಶೇಷ ಕಾರ್ಯಾಚರಣೆ ನಡೆಸುವಂತೆ ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಶ್ರೀ ಕುಲದೀಪ್ ಕುಮಾರ್ ಜೈನ್ ರವರ ಮಾರ್ಗದರ್ಶನದಂತೆ, DCP ಗಳಾದ ಅಂಶುಕುಮಾರ್ (ಕಾ&ಸು) ಮತ್ತು ದಿನೇಶ್ ಕುಮಾರ್ (ಅಪರಾಧ ಮತ್ತು ಸಂಚಾರ) ರವರ ನಿರ್ದೇಶನದಂತೆ, ಮಂಗಳೂರು ಉತ್ತರ ಉಪ ವಿಭಾಗದ ACP ಮನೋಜ್ ಕುಮಾರ್ ನಾಯ್ಕ್ ಮತ್ತು ಬಜಪೆ ಪೊಲೀಸ್ ನಿರೀಕ್ಷಕರಾದ ಶ್ರೀ ಪ್ರಕಾಶ್ ರವರ ನೇತೃತ್ವದಲ್ಲಿ ಪೊಲೀಸ್ ಉಪ ನಿರೀಕ್ಷಕರಾದ ಗುರಪ್ಪ ಕಾಂತಿ, ರೇವಣ ಸಿದ್ದಪ್ಪ, ಕುಮಾರೇಶನ್, ಲತಾ ಮತ್ತು ಅಪರಾಧ ಪತ್ತೆ ವಿಭಾಗದ ಸಿಬ್ಬಂದಿಗಳಾದ ಎ.ಎಸ್.ಐ ರಾಮ ಪೊಜಾರಿ, ಸುಜನ್ , ರಶೀದ್ ಶೇಖ್, ಬಸವರಾಜ್ ಪಾಟೀಲ್, ಜಗದೀಶ್, ಸಂತೋಷ್, ಪ್ರಕಾಶ, ಕೆಂಚಪ್ಪ, ಕೆಂಚನಗೌಡ ರವರು ಪತ್ತೆ ಕಾರ್ಯದಲ್ಲಿ ಭಾಗವಹಿಸಿ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.