ಪುತ್ತೂರು ವೈದ್ಯರ ನಿರ್ಲಕ್ಷ, ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಸಾವು,ಬಾಲಕನ ಶವವಿಟ್ಟು ಪ್ರತಿಭಟನೆ

ಕರಾವಳಿ

ಸುಳ್ಯ ಶಾಂತಿನಗರ ನಿವಾಸಿ 17 ವರ್ಷ ಪ್ರಾಯದ ಬಾಲಕ ಹೊಟ್ಟೆನೋವೆಂದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನಡೆಸಿದ ಬಳಿಕ ಸರಿಯಾದ ಉಪಕರಣವಿಲ್ಲವೆಂದು ರೋಗಿಯನ್ನು ಮಂಗಳೂರಿನ ಆಸ್ಪತ್ರೆಗೆ ಕಳುಹಿಸಿದ್ದರು. ಆ ವೇಳೆಗಾಗಲೇ ಬಾಲಕ ಮೃತಪಟ್ಟಿರುವುದಾಗಿ ವೈದರು ತಿಳಿಸಿದ್ದು, ಬಾಲಕನ ಸಾವಿನ ಹಿಂದೆ ಕುಟುಂಬದವರು ಸಂಶಯ ವ್ಯಕ್ತಪಡಿಸಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಪುತ್ತೂರು ಖಾಸಗಿ ಆಸ್ಪತ್ರೆಯ ಮುಂಭಾಗದಲ್ಲಿ ಮೃತ ಬಾಲಕನ ಶವವನ್ನಿಟ್ಟು ಪ್ರತಿಭಟನೆ ನಡೆಸಿದ್ದಾರೆ.

ಶ್ರೀಜಿತ್‌ಗೆ ಎಂಬ ಬಾಲಕನಿಗೆ ಕಳೆದ ಎರಡು ದಿನಗಳಿಂದ ಹೊಟ್ಟೆ ನೋವು ಕಾಣಿಸಿದ್ದು ಆ. 13ರಂದು ನೋವು ಉಲ್ಬಣಗೊಂಡು ಮನೆಯವರು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಕರೆತಂದಿದ್ದರು.ಅಲ್ಲಿ ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆ ನಡೆಸಬೇಕೆಂದಾಗ ಬಾಲಕನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಿದ್ದು,ಪುತ್ತೂರಿನ ಖಾಸಾಗಿ ಅಸ್ಪತ್ರೆಯ ವೈದ್ಯರು ಬಾಲಕನಿಗೆ ಕೂಡಲೇ ಶಸ್ತ್ರಚಿಕಿತ್ಸೆ ನಡೆಸಬೇಕೆಂದು ಹೇಳಿದಾಗ ಅತನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಮನೆಯವರು ದಾಖಲಿಸಿದ್ದಾರೆ.ಆ.13ರಂದು ಸಂಜೆ ಶಸ್ತ್ರ ಚಿಕಿತ್ಸೆ ನಡೆದಿದ್ದು ಬಳಿಕ ಬಾಲಕನ ಸ್ಥಿತಿ ಗಂಭೀರವಾದಾಗ ಮಂಗಳೂರು ಕೆ ಎಂ ಸಿ ಆಸ್ಪತ್ರೆಗೆ ಕೊಂಡೊಯ್ಯುವಂತೆ ಅಲ್ಲಿಯ ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ. ಆ.14ರಂದು ಬೆಳಿಗ್ಗೆ ಆತನನ್ನು ಮಂಗಳೂರು ಕೆ ಎಂ ಸಿ ಆಸ್ಪತ್ರೆಗೆ ದಾಖಲಾಗಿಸಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೃತ ಬಾಲಕ ತಾಯಿ ಪ್ರೇಮ, ಸಹೋದರ ಶ್ರೀನಿತ್ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಇದೀಗ ಬಾಲಕನ ಸಾವಿಗೆ ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷವೇ ಕಾರಣವೆಂದು ಬಾಲಕನ ಪೋಷಕರು ಮತ್ತು ಕುಟುಂಬಸ್ಥರು ಆರೋಪಿಸಿ ಬಾಲಕನ ಮೃತ ಶವವನ್ನು ಪುತ್ತೂರು ಖಾಸಗಿ ಆಸ್ಪತ್ರೆಯ ಮುಂದಿಟ್ಟು ಧರಣಿ ನಡೆಸಿ,ವೈದ್ಯರ ವಿರುದ್ದ ದೂರು ದಾಖಲಿಸಿ,ಬಾಲಕನ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು,ಬಾಲಕನ ಸಾವಿಗೆ ಕಾರಣರಾದ ವೈದ್ಯರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೇಂದು ಆಗ್ರಹಿಸಿದ್ದಾರೆ.